ಕಳೆದ ಮೇ 28ರಂದು ದೆಹಲಿಯಲ್ಲಿ ನೂತನ ಸಂಸತ್ತು ಭವನ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತು ಮತರರು 
ದೇಶ

ಜುಲೈ 3ನೇ ವಾರ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ ಸಾಧ್ಯತೆ, ಕಲಾಪ ಮಧ್ಯಭಾಗದಲ್ಲಿ ಹೊಸ ಸಂಸತ್ತು ಭವನಕ್ಕೆ ಶಿಫ್ಟ್

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ ಮೂರನೇ ವಾರದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ, ಅಧಿವೇಶನಗಳು ಹಳೆಯ ಸಂಸತ್ ಭವನದಲ್ಲಿ ಪ್ರಾರಂಭವಾಗಿ ಮಧ್ಯದಲ್ಲಿ ಹೊಸ ಸಂಸತ್ತು ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿವೆ ಎಂದು ಸಂಸತ್ತಿನ ಮೂಲಗಳು ತಿಳಿಸಿವೆ. 

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ(Mansoon session) ಜುಲೈ ಮೂರನೇ ವಾರದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ, ಅಧಿವೇಶನಗಳು ಹಳೆಯ ಸಂಸತ್ ಭವನದಲ್ಲಿ ಪ್ರಾರಂಭವಾಗಿ ಮಧ್ಯದಲ್ಲಿ ಹೊಸ ಸಂಸತ್ತು ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿವೆ ಎಂದು ಸಂಸತ್ತಿನ ಮೂಲಗಳು ತಿಳಿಸಿವೆ. 

ಮೇ 28ರಂದು ನೂತನ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ(PM Narendra Modi) ಉದ್ಘಾಟಿಸಿದ್ದರು. ಸುಮಾರು ಒಂದು ತಿಂಗಳ ಅವಧಿಯ ಮುಂಗಾರು ಅಧಿವೇಶನವು 20 ಕಾರ್ಯಕಲಾಪಗಳನ್ನು ನಡೆಸುವ ಸಾಧ್ಯತೆಯಿದೆ. ಸ್ವಾತಂತ್ರ್ಯ ದಿನಾಚರಣೆಯ ಮೊದಲು ಮುಕ್ತಾಯಗೊಳ್ಳಲಿದೆ.

ಹಳೆಯ ಸಂಸತ್ ಭವನದಲ್ಲಿ ಅಧಿವೇಶನ ಆರಂಭವಾಗಲಿದ್ದು, ನಂತರ ಹೊಸ ಸಂಸತ್ತಿಗೆ ತೆರಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಅಧಿವೇಶನದ ಸಮಯದಲ್ಲಿ, ಸರ್ಕಾರವು ಸುಪ್ರೀಂ ಕೋರ್ಟ್ ತೀರ್ಪನ್ನು ರದ್ದುಗೊಳಿಸಿದ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಸುಗ್ರೀವಾಜ್ಞೆಗೆ ಬದಲಾಗಿ ಮಸೂದೆಯನ್ನು ತಂದು ಶೀಘ್ರವಾಗಿ ಅಂಗೀಕರಿಸಲು ಸರ್ಕಾರ ಪ್ರಯತ್ನಿಸಲಿದೆ.

ಕೇಂದ್ರ ಸಚಿವ ಸಂಪುಟ ನಿನ್ನೆ ಅಂಗೀಕರಿಸಿದ ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನ ಮಸೂದೆಯನ್ನೂ ಮುಂಗಾರು ಅಧಿವೇಶನದಲಲಿ ಮಂಡಿಸುವ ಸಾಧ್ಯತೆ ಇದೆ. ಪ್ರಸ್ತಾವಿತ ಪ್ರತಿಷ್ಠಾನವು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ದೇಶದ ಸಂಶೋಧನಾ ಸಾಮರ್ಥ್ಯವನ್ನು ಹೆಚ್ಚಿಸಲು ಹೊಸ ನಿಧಿ ಸಂಸ್ಥೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT