ಪ್ರಧಾನಿ ಮೋದಿ 
ದೇಶ

ಸೋಮವಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಮಂತ್ರಿಮಂಡಲದ ಸಭೆ

ಪ್ರಧಾನಿ ನರೇಂದ್ರ ಮೋದಿ ಜುಲೈ 3 ರಂದು ಕೇಂದ್ರ ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜುಲೈ 3 ರಂದು ಕೇಂದ್ರ ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಮೋದಿಯವರು ಬಿಜೆಪಿಯ ಉನ್ನತ ನಾಯಕರೊಂದಿಗೆ ತೀವ್ರ ಸಮಾಲೋಚನೆ ನಡೆಸಿದ ಒಂದು ದಿನದ ನಂತರ ಈ ಬೆಳವಣಿಗೆಯಾಗಿದ್ದು, ಮಂತ್ರಿಮಂಡಲದ ಪುನರ್ ರಚನೆಯ  ಊಹಾಪೋಹಗಳಿಗೆ ಕಾರಣವಾಗಿದೆ.  ಸೆಪ್ಟೆಂಬರ್‌ನಲ್ಲಿ ಜಿ 20 ಶೃಂಗಸಭೆ ನಡೆದ ಪ್ರಗತಿ ಮೈದಾನದಲ್ಲಿನ ನೂತನ ಕನ್ವೆನ್ಷನ್ ಸೆಂಟರ್‌ನಲ್ಲಿ ಜುಲೈ 3 ರ ಸಭೆ ನಡೆಯುವ ಸಾಧ್ಯತೆಯಿದೆ.

ಮೋದಿ ಅವರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಇತರರೊಂದಿಗೆ ಮ್ಯಾರಥಾನ್ ಸಭೆಗಳನ್ನು ನಡೆಸಿದರು. ಸಭೆಯಲ್ಲಿ ನಡ್ಡಾ ಭಾಗವಹಿಸಿದ್ದರಿಂದ ಈ ವರ್ಷಾಂತ್ಯದಲ್ಲಿ ನಡೆಯಲಿರುವ ಪ್ರಮುಖ ವಿಧಾನಸಭಾ ಚುನಾವಣೆಗಳು ಮತ್ತು 2024 ರ ಲೋಕಸಭೆ ಚುನಾವಣೆಗೆ ಪಕ್ಷ ಸಜ್ಜಾಗುತ್ತಿರುವಾಗ, ರಾಜ್ಯ ಮಟ್ಟಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ಬದಲಾವಣೆಗಳ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿದೆ. 

ಕಳೆದ ಕೆಲವು ದಿನಗಳಿಂದ ಶಾ, ನಡ್ಡಾ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್ ಸಾಂಸ್ಥಿಕ ಮತ್ತು ರಾಜಕೀಯ ವಿಷಯಗಳ ಕುರಿತು ಹಲವು ಸುತ್ತಿನ ಚರ್ಚೆ ನಡೆಸಿದ್ದಾರೆ. ಈ ವರ್ಷದ ಕೊನೆಯಲ್ಲಿ ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಚುನಾವಣೆಗಳು ನಡೆಯಲಿವೆ. ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಕೆಲವು ದಿನಗಳ ಮುನ್ನ ಸಚಿವರ ಮಂಡಳಿ ಸಭೆ ನಡೆಯುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT