ಸಂಗ್ರಹ ಚಿತ್ರ 
ದೇಶ

ದೇಶದಾದ್ಯಂತ ಮುಸಲ್ಮಾನರ ಪವಿತ್ರ ಹಬ್ಬ ಬಕ್ರೀದ್ ಆಚರಣೆ: ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭಾಶಯ

ದೇಶದಾದ್ಯಂತ ಗುರುವಾರ ಈದ್ ಉಲ್ ಅಧಾ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯಗಳನ್ನು ಕೋರಿದ್ದಾರೆ.

ನವದೆಹಲಿ: ದೇಶದಾದ್ಯಂತ ಗುರುವಾರ ಈದ್ ಉಲ್ ಅಧಾ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಈದ್-ಉಜ್-ಜುಹಾ ಈ ಶುಭ ಸಂದರ್ಭದಲ್ಲಿ, ನಾನು ಎಲ್ಲಾ ದೇಶವಾಸಿಗಳಿಗೆ, ವಿಶೇಷವಾಗಿ ಮುಸ್ಲಿಂ ಸಹೋದರ ಸಹೋದರಿಯರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಈದ್-ಉಜ್-ಜುಹಾ ಪ್ರೀತಿ, ತ್ಯಾಗದ ಪವಿತ್ರ ಹಬ್ಬವಾಗಿದೆ. ಈ ಹಬ್ಬವು ಪರಿತ್ಯಾಗದ ಮಾರ್ಗವನ್ನು ಅನುಸರಿಸಲು ಮತ್ತು ಮಾನವೀಯತೆಯ ಸೇವೆಯನ್ನು ನಿಸ್ವಾರ್ಥವಾಗಿ ಮಾಡಲು ಪ್ರೇರೇಪಿಸುತ್ತದೆ. ಈ ಸಂದರ್ಭದಲ್ಲಿ ಸಮಾಜದಲ್ಲಿ ಪರಸ್ಪರ ಸೌಹಾರ್ದತೆಯನ್ನು ಹೆಚ್ಚಿಸಲು ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್ ಮಾಡಿ, ಈದ್-ಉಲ್-ಅಧಾದ ಶುಭಾಶಯಗಳು. ಈ ದಿನ ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಇದು ನಮ್ಮ ಸಮಾಜದಲ್ಲಿ ಒಗ್ಗಟ್ಟು ಮತ್ತು ಸಾಮರಸ್ಯದ ಮನೋಭಾವವನ್ನು ಎತ್ತಿ ಹಿಡಿಯಲಿ ಈದ್ ಮುಬಾರಕ್ ಎಂದು ಶುಭಾಶಯಗಳನ್ನು ತಿಳಿಸಿದ್ದಾರೆ.

ಬಕ್ರೀದ್ ತ್ಯಾಗದ ಹಬ್ಬ. ಇದು ಇಸ್ಲಾಮಿಕ್ ಸಮುದಾಯವು ಆಚರಿಸುವ ಎರಡನೇ ಪ್ರಮುಖ ಹಬ್ಬವಾಗಿದೆ. ಈ ದಿನವನ್ನು ಪ್ರವಾದಿ ಇಬ್ರಾಹಿಂ ಅವರು ತಮ್ಮ ಮಗನ ತ್ಯಾಗವನ್ನು ಸ್ಮರಿಸುವ ಸಲುವಾಗಿ ಪ್ರತಿವರ್ಷ ಈದ್ ಉಲ್ ಅಧಾವನ್ನು ಆಚರಿಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT