ಇಂಫಾಲದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ. 
ದೇಶ

ಹಿಂಸಾಚಾರ ಸೃಷ್ಟಿಯಾಗುವ ಆತಂಕ: ರಾಹುಲ್ ಗಾಂಧಿ ಬೆಂಗಾವಲು ಪಡೆಗೆ ಮಣಿಪುರ ಪೊಲೀಸರ ತಡೆ

ಮಣಿಪುರ ಹಿಂಸಾಚಾರದಿಂದ ಹೆಚ್ಚು ತತ್ತರಿಸಿರುವ ಚುರಚಂದಪುರ ಜಿಲ್ಲೆಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ಪಡೆ ವಾಹನವನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ಗುರುವಾರ ತಿಳಿದುಬಂದಿದೆ.

ಇಂಫಾಲ: ಮಣಿಪುರ ಹಿಂಸಾಚಾರದಿಂದ ಹೆಚ್ಚು ತತ್ತರಿಸಿರುವ ಚುರಚಂದಪುರ ಜಿಲ್ಲೆಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ಪಡೆ ವಾಹನವನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ಗುರುವಾರ ತಿಳಿದುಬಂದಿದೆ.

ರಾಹುಲ್ ಗಾಂಧಿ ಇಂದು ಬೆಳಗ್ಗೆ ಇಂಫಾಲ್ ಗೆ ಬಂದಿಳಿದರು ಹಾಗೂ ಚುರಚಂದಪುರ ಜಿಲ್ಲೆಗೆ ತೆರಳುತ್ತಿದ್ದ ಮಾರ್ಗದಲ್ಲಿ ಅವರನ್ನು ತಡೆಯಲಾಗಿದೆ,

ಮಣಿಪುರಕ್ಕೆ ಇಂದು ಭೇಟಿ ನೀಡಿದ್ದ ರಾಹುಲ್ ಗಾಂಂಧಿಯವರು ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡಿ, ಸಂಕಷ್ಟಕ್ಕೊಳಗಾದ ಜನರೊಂದಿಗೆ ಮಾತುಕತೆ ನಡೆಸಲು ಮುಂದಾಗಿದ್ದರು. ಆದರೆ, ಇಂಫಾಲದಿಂದ 20 ಕಿಲೋಮೀಟರ್ ದೂರದಲ್ಲಿರುವ ಬಿಷ್ಣುಪುರದಲ್ಲಿ ಮಣಿಪುರ ಪೊಲೀಸರು ಅವರನ್ನು ತಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ.

ಹಿಂಸಾಚಾರ ಭೀತಿಯಿಂದಾಗಿ ಬೆಂಗಾವಲು ಪಡೆಯನ್ನು ತಡೆಹಿಡಿಯಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಬಿಷ್ಣುಪುರ್ ಜಿಲ್ಲೆಯ ಉಟ್ಲೌ ಗ್ರಾಮದ ಬಳಿ ಹೆದ್ದಾರಿಯಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಲಾಗಿತ್ತು. ಬೆಂಗಾವಲು ಪಡೆಗೆ ಕೆಲವು ಕಲ್ಲುಗಳನ್ನು ಎಸೆಯಲಾಗಿತ್ತು. ಹೀಗಾಗಿ ಮಾರ್ಗದಲ್ಲಿ ಹಿಂಸಾಚಾರ ಸೃಷ್ಟಿಯಾಗುವ ಆತಂಕದಿಂದ ಅವರನ್ನು ತಡೆಹಿಡಿಯಲಾಯಿತು ಎಂದು ತಿಳಿಸಿದ್ದಾರೆ.

ಮತ್ತೆ ಹಿಂಸಾಚಾರ ಭುಗಿಲೇಳುವ ಆತಂಕದಲ್ಲಿದ್ದೇವೆ. ಹೀಗಾಗಿ ರಾಹುಲ್ ಗಾಂಧಿಯವರ ಬೆಂಗಾವಲು ವಾಹನವನ್ನು ತಡೆದು, ಬಿಷ್ಣುಪುರದಲ್ಲಿಯೇ ತಂಗುವಂತೆ ಮನವಿ ಮಾಡಿಕೊಳ್ಳಲಾಯಿತು ಎಂದು ಹೇಳಿದ್ದಾರೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು, ರಾಹುಲ್ ಗಾಂಧಿಗೆ ಕೈ ಬೀಸಲು ಜನರು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದರು, ಆದರೆ, ನಮ್ಮನ್ನೇಕೆ ತಡೆದಿದ್ದಾರೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಸಂಕಷ್ಟಕ್ಕೊಳಗಾದವರ ಭೇಟಿಗೆ ಪೊಲೀಸರು ನಮಗೇಕೆ ಅವಕಾಶ ನೀಡುತ್ತಿಲ್ಲ ಎಂಬುದು ನಮಗೆ ಅರ್ಥವಾಗುತ್ತಿಲ್ಲ. ಸಂತ್ರಸ್ತರನ್ನು ಭೇಟಿ ಮಾಡಲಷ್ಟೇ ರಾಹುಲ್ ಗಾಂಧಿ ಸ್ಥಳಕ್ಕೆ ತೆರಳಿದ್ದಾರೆ. ನಾವು ಸುಮಾರು 20-25 ಕಿಮೀ ಸಂಚರಿಸಿದ್ದೆವು. ಆದರೆ, ಎಲ್ಲಿಯೂ ರಸ್ತೆ ತಡೆ ಇರಲಿಲ್ಲ. ರಾಹುಲ್ ಗಾಂಧಿ ಕಾರಿನೊಳಗೆ ಕುಳಿತಿದ್ದಾರೆ. ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿದ್ದು ಯಾರು ಎಂಬುದು ನಮಗೆ ತಿಳಿಯುತ್ತಿಲ್ಲ ಎಂದು ತಿಳಿಸಿದ್ದಾರೆ.

ಮಣಿಪುರದಲ್ಲಿ ಪರಿಶಿಷ್ಟ ಪಂಗಡ ಮೀಸಲಾತಿ ವಿಚಾರವಾಗಿ ಮೈತೇಯಿ ಮತ್ತು ಕುಕಿ ಸಮುದಾಯದ ನಡುವೆ ಹಿಂಸಾಚಾರ ನಡೆಯುತ್ತಿದೆ. ಇದುವರೆಗೆ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT