ಸುಶಿಲ್ ಮೋದಿ 
ದೇಶ

ಜುಲೈ 3 ರಂದು ಸಂಸದೀಯ ಸ್ಥಾಯಿ ಸಮಿತಿಯಲ್ಲಿ ಯುಸಿಸಿ ಬಗ್ಗೆ ಚರ್ಚೆ: ಸುಶೀಲ್ ಮೋದಿ

ಜುಲೈ 3 ರಂದು ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಕುರಿತು ಸಂಸದೀಯ ಸ್ಥಾಯಿ ಸಮಿತಿಯಲ್ಲಿ ಚರ್ಚಿಸಲಾಗುವುದು ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಮತ್ತು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು...

ಪಾಟ್ನಾ: ಜುಲೈ 3 ರಂದು ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಕುರಿತು ಸಂಸದೀಯ ಸ್ಥಾಯಿ ಸಮಿತಿಯಲ್ಲಿ ಚರ್ಚಿಸಲಾಗುವುದು ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಮತ್ತು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು ನ್ಯಾಯಕ್ಕೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿ ಅಧ್ಯಕ್ಷ ಸುಶೀಲ್ ಮೋದಿ ಶುಕ್ರವಾರ ಹೇಳಿದ್ದಾರೆ.

ಇಂದು ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, ಸಮಿತಿಯು ಎಲ್ಲಾ ರಾಜಕೀಯ ಪಕ್ಷಗಳ ಸದಸ್ಯರನ್ನು ಹೊಂದಿರುವುದರಿಂದ, ಸಮಿತಿಯ ಸಭೆಯು ರಾಜಕೀಯೇತರವಾಗಿದೆ ಎಂದು ತಿಳಿಸಿದ್ದಾರೆ.

ಯುಸಿಸಿ ಕುರಿತ ಕಾನೂನು ಆಯೋಗದ ವರದಿ ಬಗ್ಗೆ ಜುಲೈ 3ರಂದು ಸಮಿತಿಯಲ್ಲಿ ಚರ್ಚಿಸುತ್ತೇವೆ. ಅಗತ್ಯವಿದ್ದಲ್ಲಿ ಇನ್ನೊಂದು ಸಭೆಯನ್ನು ಕರೆದು ಮತ್ತಷ್ಟು ಚರ್ಚಿಸುತ್ತೇವೆ. ಈ ವಿಚಾರದಲ್ಲಿ ಸಮಿತಿ ಸಂಪೂರ್ಣ ತಟಸ್ಥವಾಗಿದೆ ಎಂದಿದ್ದಾರೆ.

ಜುಲೈ 3 ರ ಸಭೆಯಲ್ಲಿ ಯುಸಿಸಿ ಕುರಿತು ನಿಮ್ಮ ಸಲಹೆ, ಸೂಚನೆಗಳನ್ನು ತಿಳಿಸುವಂತೆ ಸದಸ್ಯರಿಗೆ ಕೋರಲಾಗುವುದು ಮತ್ತು ಅವರ ಅಭಿಪ್ರಾಯವನ್ನು ಪರಿಗಣಿಸಲಾಗುವುದು ಎಂದು ಮೋದಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕನಕಪುರದಲ್ಲಿ ಮೆಡಿಕಲ್ ಕಾಲೇಜ್; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಪುಟ ಅಸ್ತು

ADR report: ದೇಶದಲ್ಲಿ ಶೇ. 47 ರಷ್ಟು ಸಚಿವರ ಮೇಲೆ ಕ್ರಿಮಿನಲ್ ಆರೋಪ, ಬಿಲಿಯನೇರ್ ಪೈಕಿ ಕರ್ನಾಟಕಕ್ಕೆ ಮೊದಲ ಸ್ಥಾನ, ಡಿಕೆಶಿ ಎಷ್ಟನೇ ಶ್ರೀಮಂತ?

ಉಕ್ರೇನ್‌ನಲ್ಲಿ ಶಾಂತಿ ನೆಲೆಸಲು ಭಾರತದ ಮೇಲಿನ 'ಸುಂಕಾಸ್ತ್ರ' ನಿರ್ಣಾಯಕ: US ಸುಪ್ರೀಂ ಕೋರ್ಟ್‌ಗೆ ಡೊನಾಲ್ಡ್ ಟ್ರಂಪ್ ಮಾಹಿತಿ

NIRF ರ‍್ಯಾಂಕಿಂಗ್‌: ಸತತ 7ನೇ ವರ್ಷವೂ ಐಐಟಿ ಮದ್ರಾಸ್ ಗೆ ಅಗ್ರಸ್ಥಾನ; IISc ಬೆಂಗಳೂರಿಗೆ 2ನೇ ಸ್ಥಾನ

SCO Summit 2025: ಬೀಜಿಂಗ್‌, ಮಾಸ್ಕೋ ಮತ್ತು ವಾಷಿಂಗ್ಟನ್‌ ನಡುವೆ ಭಾರತದ ಜಾಗರೂಕ ನಡಿಗೆ (ಜಾಗತಿಕ ಜಗಲಿ)

SCROLL FOR NEXT