ತುಷಾರ್ ಮೆಹ್ತಾ 
ದೇಶ

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವಧಿ ಮತ್ತೆ ಮೂರು ವರ್ಷ ವಿಸ್ತರಣೆ

ಹಿರಿಯ ವಕೀಲ ತುಷಾರ್ ಮೆಹ್ತಾ ಅವರನ್ನು ಶುಕ್ರವಾರ ಮೂರು ವರ್ಷಗಳ ಅವಧಿಗೆ ಭಾರತದ ಸಾಲಿಸಿಟರ್ ಜನರಲ್ ಆಗಿ ಮರು ನೇಮಕ ಮಾಡಲಾಗಿದೆ.

ನವದೆಹಲಿ: ಹಿರಿಯ ವಕೀಲ ತುಷಾರ್ ಮೆಹ್ತಾ ಅವರನ್ನು ಶುಕ್ರವಾರ ಮೂರು ವರ್ಷಗಳ ಅವಧಿಗೆ ಭಾರತದ ಸಾಲಿಸಿಟರ್ ಜನರಲ್ ಆಗಿ ಮರು ನೇಮಕ ಮಾಡಲಾಗಿದೆ.

ಮೆಹ್ತಾ ಅವರನ್ನು ಅಕ್ಟೋಬರ್ 10, 2018 ರಂದು ಸಾಲಿಸಿಟರ್ ಜನರಲ್ ಆಗಿ ನೇಮಿಸಲಾಯಿತು ಮತ್ತು ಅಂದಿನಿಂದ ಅವರ ಅವಧಿಯನ್ನು ಎರಡು ಬಾರಿ ವಿಸ್ತರಣೆ ಮಾಡಲಾಗಿದೆ.

ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ ಆದೇಶದ ಪ್ರಕಾರ, ಮೆಹ್ತಾ ಅಲ್ಲದೆ, ಸುಪ್ರೀಂ ಕೋರ್ಟ್‌ಗೆ ಆರು ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಳನ್ನು ಮೂರು ವರ್ಷಗಳ ಅವಧಿಗೆ ಮರುನೇಮಕ ಮಾಡಲಾಗಿದೆ.

ವಿಕ್ರಮಜಿತ್ ಬ್ಯಾನರ್ಜಿ, ಕೆ ಎಂ ನಟರಾಜ್, ಬಲ್ಬೀರ್ ಸಿಂಗ್, ಎಸ್ ವಿ ರಾಜು, ಎನ್ ವೆಂಕಟರಾಮನ್ ಮತ್ತು ಐಶ್ವರ್ಯ ಭಾಟಿ ಅವರು ಸುಪ್ರೀಂ ಕೋರ್ಟ್‌ಗೆ ಮರು ನೇಮಕಗೊಂಡ ಆರು ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಳಾಗಿದ್ದಾರೆ.

ಹೆಚ್ಚುವರಿ ಸಾಲಿಸಿಟರ್ ಜನರಲ್ ಮಾಧವಿ ಗೊರಾಡಿಯಾ ದಿವಾನ್ ಮತ್ತು ಸಂಜಯ್ ಜೈನ್ ಅವರ ಅಧಿಕಾರಾವಧಿ ಶುಕ್ರವಾರ ಕೊನೆಗೊಂಡಿದ್ದು, ಈ ಇಬ್ಬರು ಮರು ನೇಮಕಗೊಂಡ ಕಾನೂನು ಅಧಿಕಾರಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ.

ಹೆಚ್ಚುವರಿ ಸಾಲಿಸಿಟರ್ ಜನರಲ್ ಜಯಂತ್ ಕೆ ಸುದ್ ಅವರ ಅಧಿಕಾರಾವಧಿ ಗುರುವಾರ ಕೊನೆಗೊಂಡಿದ್ದು, ಅವರೂ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!