ಸಾಂದರ್ಭಿಕ ಚಿತ್ರ 
ದೇಶ

ತೆಲಂಗಾಣ: ಕಾಲೇಜಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆ

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ಬುಧವಾರ 16 ವರ್ಷದ ವಿದ್ಯಾರ್ಥಿ ತನ್ನ ತರಗತಿಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ರಂಗಾರೆಡ್ಡಿ: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ಬುಧವಾರ 16 ವರ್ಷದ ವಿದ್ಯಾರ್ಥಿ ತನ್ನ ತರಗತಿಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಮೃತನನ್ನು ನಾಗುಲಾ ಸಾತ್ವಿಕ್ ಎಂದು ಗುರುತಿಸಲಾಗಿದ್ದು, ಖಾಸಗಿ ಕಾಲೇಜು ಆಡಳಿತ ಮಂಡಳಿ ನೀಡಿದ ಚಿತ್ರಹಿಂಸೆಯಿಂದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೋಷಕರು ಆರೋಪಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿ ನಿನ್ನೆ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ ನರಸಿಂಗಿಯಲ್ಲಿರುವ ಖಾಸಗಿ ಕಾಲೇಜಿನ ಇಂಟರ್ ಮೀಡಿಯೇಟ್ ವಿದ್ಯಾರ್ಥಿಯಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ.

"ವಿದ್ಯಾರ್ಥಿ ಏಕೆ ಆತ್ಮಹತ್ಯೆ ಮಾಡಿಕೊಂಡ ಎಂದು ಈಗಲೇ ಹೇಳುವುದು ಕಷ್ಟ. ಆದರೆ, ಖಾಸಗಿ ಕಾಲೇಜಿನ ಮ್ಯಾನೇಜ್‌ಮೆಂಟ್‌ ನೀಡಿದ ಚಿತ್ರಹಿಂಸೆಯಿಂದ ಈ ಸಾವು ಸಂಭವಿಸಿದೆ ಎಂದು ಆತನ ಪೋಷಕರು ಆರೋಪಿಸಿದ್ದಾರೆ. ನಾವು ಪ್ರಕರಣ ದಾಖಲಿಸಿಕೊಂಡಿ, ತನಿಖೆ ನಡೆಸುತ್ತಿದ್ದೇವೆ ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಘಟನೆಯ ಸುದ್ದಿ ಹೊರಬಿದ್ದ ನಂತರ, ವಿದ್ಯಾರ್ಥಿ ಸಂಘದ ಸದಸ್ಯರು ಮತ್ತು ಹುಡುಗನ ಸಂಬಂಧಿಕರು ನರಸಿಂಗಿಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka MLC Election Results: ಅಡ್ಡ ಮತದಾನದ ನಡುವೆಯೇ ಕಾಂಗ್ರೆಸ್ 5, ಬಿಜೆಪಿಗೆ ತೆಕ್ಕೆಗೆ 2 ಸ್ಥಾನ, JDS ಆಘಾತಕಾರಿ ಸೋಲು

ಫಲಿಸಿದ ಡಿಕೆ ಶಿವಕುಮಾರ್ ತಂತ್ರ: Jds-BJP ಅಡ್ಡ ಮತದಾನ, ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಗೆಲುವು!

NEET UG ಮರು ಪರೀಕ್ಷೆ: 150 ಮಿಲಿಯನ್ ಬಳಕೆದಾರರ ಹಕ್ಕುಗಳನ್ನು ಹೇಗೆ ಮೊಟಕುಗೊಳಿಸುತ್ತೀರಾ? ಟೆಲಿಗ್ರಾಮ್ ಬ್ಯಾನ್ ಪ್ರಶ್ನಿಸಿದ ಹೈಕೋರ್ಟ್!

Horrific: ಮಹಿಳೆ ಮೇಲೆ ನಿರಂತರ ಅತ್ಯಾಚಾರ, ಸೆ** ಬಳಿಕ ಮೂ** ಕುಡಿಸಿದ ಸ್ವಯಂ ಘೋಷಿತ ದೇವಮಾನವ!

ನಾವು ಒಂದು ಬಕೆಟ್ ನೀರು ಬಳಸಲ್ಲ: ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ TN ರೈತರಿಗೆ ಹೆಚ್ಚು ಪ್ರಯೋಜನ: ಸಿಎಂ ಶಿವಕುಮಾರ್

SCROLL FOR NEXT