ಹೊಸ ಲುಕ್ ನಲ್ಲಿ ರಾಹುಲ್ ಗಾಂಧಿ 
ದೇಶ

ಗಡ್ಡ ಮೀಸೆ ಟ್ರಿಮ್ ಮಾಡಿಸಿಕೊಂಡು ಹೊಸ ಲುಕ್​ನೊಂದಿಗೆ ಕೇಂಬ್ರಿಡ್ಜ್ ವಿವಿಯಲ್ಲಿ ರಾಹುಲ್ ಗಾಂಧಿ ಉಪನ್ಯಾಸ!

ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ ನೀಡಲು ಬುಧವಾರ ಬ್ರಿಟನ್‌ಗೆ ತೆರಳಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ ನೀಡಲು ಬುಧವಾರ ಬ್ರಿಟನ್‌ಗೆ ತೆರಳಿದ್ದಾರೆ. ರಾಹುಲ್ ಗಾಂಧಿ ಬ್ರಿಟನ್​ಗೆ ತೆರಳುವ ಮುನ್ನ ತಮ್ಮ ಲುಕ್​ನಲ್ಲಿ ಬದಲಾವಣೆ ಮಾಡಿಕೊಂಡಿದ್ದು, ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಪ್ರಸಿದ್ಧಿ ಪಡೆದುಕೊಂಡಿದ್ದ ತಮ್ಮ ಗಡ್ಡವನ್ನು ಟ್ರಿಮ್ ಮಾಡಿಕೊಂಡಿದ್ದಾರೆ.

ಉಪನ್ಯಾಸ ನೀಡಲು ತೆರಳುತ್ತಿದ್ದಂತೆ ರಾಹುಲ್ ಗಾಂಧಿ ಲುಕ್ ಬದಲಾಗಿದೆ. ಟೀ-ಶರ್ಟ್ ಕಳಚಿಟ್ಟು ಕೋಟು, ಟೈ ಧರಿಸಿ ಮಿಂಚುತ್ತಿದ್ದಾರೆ. ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆ ಕೊನೆಗೊಳ್ಳುವವರೆಗೆ ತಮ್ಮ ಗಡ್ಡ ಟ್ರಿಮ್ ಮಾಡಿಸಿಕೊಂಡಿರಲಿಲ್ಲ. ಈ ಲುಕ್ ಸಾಕಷ್ಟು ಪ್ರಸಿದ್ಧಿ ಪಡೆದುಕೊಂಡಿತ್ತು ಮತ್ತು ಟ್ರೋಲ್​ಗೂ ಒಳಗಾಗಿತ್ತು.

ಇದೀಗ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ ನೀಡಲು ತೆಳಿರುವ ರಾಹುಲ್, ತಮ್ಮ ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಪ್ರಯೋಗ ಮಾಡಿದ್ದಾರೆ. ಸದ್ಯ ರಾಹುಲ್ ಗಾಂಧಿಯ ಹೊಸ ಲುಕ್​ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಒಂದು ವಾರದ ಮಟ್ಟಿಗೆ ಬ್ರಿಟನ್‌ ಪ್ರವಾಸದಲ್ಲಿದ್ದಾರೆ. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ರಾಹುಲ್ ಗಾಂಧಿ ಉಪನ್ಯಾಸ ನೀಡಲಿದ್ದಾರೆ. ರಾಹುಲ್ ಗಾಂಧಿ ಭಾರತೀಯ ವಲಸಿಗ ಸಮುದಾಯದೊಂದಿಗೆ ಸಂವಾದ ನಡೆಸಲಿದ್ದಾರೆ. ಕೇಂಬ್ರಿಡ್ಜ್ ಜಡ್ಜ್ ಬ್ಯುಸಿನೆಸ್ ಸ್ಕೂಲ್ ನಲ್ಲಿ ರಾಹುಲ್ ಗಾಂಧಿ  '21 ನೇ ಶತಮಾನದಲ್ಲಿ ಕೇಳುವುದು  ಮತ್ತು ಕಲಿಯುವುದು' ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT