ದೇಶ

'ಪಿಎಂ ಯಾರಾಗಬೇಕೆಂದು ಹೇಳಿಲ್ಲ', 2024 ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳು ಒಟ್ಟಾಗಿ ಸ್ಪರ್ಧಿಸಬೇಕು: ಮಲ್ಲಿಕಾರ್ಜುನ ಖರ್ಗೆ

Vishwanath S

ಚೆನ್ನೈ: 2024ರ ಲೋಕಸಭೆ ಚುನಾವಣೆಯಲ್ಲಿ ವಿಪಕ್ಷಗಳ ಮೈತ್ರಿಕೂಟ ಜಯಿಸಿದರೆ ಕಾಂಗ್ರೆಸ್ ನೇತೃತ್ವದಲ್ಲೇ ಸರ್ಕಾರ ರಚನೆಯಾಗಲಿದೆ ಎಂದು ನಾನು ಹೇಳಿಲ್ಲ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 

ಡಿಎಂಕೆ ಅಧ್ಯಕ್ಷ, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರ 70ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಮಾತನಾಡಿದ ಮಲ್ಲಿಕಾರ್ಜುನ್ ಖರ್ಗೆ ಅವರು, ಮುಂಬುವರು ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ನೇತೃತ್ವ ಯಾರು ವಹಿಸಲಿದ್ದಾರೆ, ಯಾರು ಪ್ರಧಾನಿ ಆಗಲಿದ್ದಾರೆ ಎಂದು ಹೇಳಿಲ್ಲ. ಬಿಜೆಪಿಯನ್ನು ಸೋಲಿಸುವುದೇ ವಿಪಕ್ಷಗಳ ಮುಖ್ಯ ಗುರಿಯಾಗಿದ್ದು ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ತಮಿಳುನಾಡಿನಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿಕೂಟವು 2004, 2009ರಲ್ಲಿ ಲೋಕಸಭೆ ಚುನಾವಣೆ ಮತ್ತು 2006 ಮತ್ತು 2021ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದೆ. 2024ರ ಲೋಕಸಭೆ ಗೆಲುವಿಗಾಗಿ ನಾವು ಯುಪಿಎ ಮೈತ್ರಿಕೂಟ ಮತ್ತು ನಾಯಕತ್ವವನ್ನು ಬಲಪಡಿಸಬೇಕು. ಎಲ್ಲ ವಿರೋಧ ಪಕ್ಷಗಳು ಒಗ್ಗೂಡಬೇಕು ಎಂದರು.

ಕಾಂಗ್ರೆಸ್ ನೇತೃತ್ವದಲ್ಲೇ 2024ರಲ್ಲಿ ಸರ್ಕಾರ ರಚನೆಯಾಗಲಿದೆ ಎಂಬ ಖರ್ಗೆ ಹೇಳಿಕೆಗೆ ನ್ಯಾಷನಲ್ ಕಾನ್ಫರೆನ್ಸ್ ವರಿಷ್ಠ ಫಾರೂಕ್ ಅಬ್ದುಲ್ಲಾ ಸೇರಿ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಖರ್ಗೆ ಯೂಟರ್ನ್ ತೆಗೆದುಕೊಂಡಿದ್ದಾರೆ.

SCROLL FOR NEXT