ದೇಶ

ತ್ರಿಪುರಾ, ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಗೆಲುವು: ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

Lingaraj Badiger

ನವದೆಹಲಿ: ತ್ರಿಪುರಾ ಮತ್ತು ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ತ್ರಿಪುರಾದಲ್ಲಿ ಬಿಜೆಪಿ-ಐಪಿಎಫ್‌ಟಿ ಮೈತ್ರಿಕೂಟ 31 ಸ್ಥಾನಗಳನ್ನು ಗೆದ್ದು, ಎರಡನೇ ಅವಧಿಗೆ ಅಧಿಕಾರಕ್ಕೇರುತ್ತಿದ್ದೆ. 

ಇನ್ನು 60 ಸದಸ್ಯ ಬಲದ ನಾಗಾಲ್ಯಾಂಡ್ ವಿಧಾನಸಭೆಯಲ್ಲಿ ಆಡಳಿತಾರೂಢ ಎನ್‌ಡಿಪಿಪಿ-ಬಿಜೆಪಿ ಮೈತ್ರಿಕೂಟ 33 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ(ಎನ್‌ಡಿಪಿಪಿ) 21 ಸ್ಥಾನಗಳನ್ನು ಗೆದ್ದರೆ, ಅದರ ಮಿತ್ರ ಪಕ್ಷ ಬಿಜೆಪಿ 12 ಸ್ಥಾನಗಳನ್ನು ಪಡೆದಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ತ್ರಿಪುರಾದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಮತ್ತು ನಾಗಾಲ್ಯಾಂಡ್‌ನಲ್ಲಿ ಮಿತ್ರಪಕ್ಷ ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿಯೊಂದಿಗೆ ಅಧಿಕಾರ ಉಳಿಸಿಕೊಂಡಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ. 

ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ ಮೋದಿ ಅವರು ಉಭಯ ರಾಜ್ಯಗಳ ಗೆಲುವಿಗೆ ಅಭಿನಂದನೆ ಸಲ್ಲಿಸುವ ಸಾಧ್ಯತೆಯಿದೆ.

SCROLL FOR NEXT