ಅನುರಾಗ್ ಠಾಕೂರ್ 
ದೇಶ

'ಪೆಗಾಸಸ್' ಅವರ ಮನಸ್ಸಿನಲ್ಲಿದೆ: ರಾಹುಲ್ ಗಾಂಧಿ ಆರೋಪದ ಬಗ್ಗೆ ಅನುರಾಗ್ ಠಾಕೂರ್ ತೀವ್ರ ಕಿಡಿ

ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ‘ಪೆಗಾಸಸ್’ ವಿಷಯದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೀಡಿದ ಹೇಳಿಕೆಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಶುಕ್ರವಾರ ತೀವ್ರವಾಗಿ ಕಿಡಿ ಕಾರಿದ್ದಾರೆ.

ನವದೆಹಲಿ: ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ‘ಪೆಗಾಸಸ್’ ವಿಷಯದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೀಡಿದ ಹೇಳಿಕೆಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಶುಕ್ರವಾರ ತೀವ್ರವಾಗಿ ಕಿಡಿ ಕಾರಿದ್ದಾರೆ.

ಕೇಂಬ್ರಿಜ್ ವಿಶ್ವವಿದ್ಯಾಲಯದ ಉಪನ್ಯಾಸದ ವೇಳೆ ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಪೆಗಾಸಸ್ ಬೇಹುಗಾರಿಕಾ ಕುತಂತ್ರಾಂಶದ ವಿವಾದವನ್ನು ಪ್ರಸ್ತಾಪಿಸಿದ್ದರು.

ತಾವೂ ಸೇರಿದಂತೆ ಭಾರತದ ಹಲವು ರಾಜಕಾರಣಿಗಳ ಮೊಬೈಲ್‌ಗಳಲ್ಲಿ ಪೆಗಾಸಸ್ ಸಾಫ್ಟ್‌ವೇರ್ ಅನ್ನು ಸ್ಥಾಪಿಸಲಾಗಿತ್ತು. ಗುಪ್ತಚರ ಅಧಿಕಾರಿಗಳು ನನ್ನನ್ನು ಕರೆದು, ನೀವು ಪೋನ್‌ನಲ್ಲಿ ಮಾತನಾಡುವಾಗ ದಯವಿಟ್ಟು ಜಾಗರೂಕರಾಗಿರಿ. ನಿಮ್ಮ ಕರೆಗಳನ್ನು ನಾವು ರೆಕಾರ್ಡ್ ಮಾಡಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದರು ಎಂದು ಹೇಳಿದ್ದಾರೆ.

ಈ ಹೇಳಿಕೆಗೆ ಅನುರಾಗ್ ಠಾಕೂರ್ ಅವರು ತೀವ್ರವಾಗಿ ಕಿಡಿಕಾರಿದ್ದು, ಆಧಾರರಹಿತ ಆರೋಪಗಳನ್ನು ಮಾಡುವುದು ಮತ್ತು ವಿದೇಶಗಳಲ್ಲಿ ಭಾರತಕ್ಕೆ 'ಮಾನಹಾನಿ' ಮಾಡುವ ಗುಣವನ್ನು ಬೆಳೆಸಿಕೊಂಡಿದ್ದಾರೆ. ಪೆಗಾಸಸ್ ಅವರ ಮನಸ್ಸಿನಲ್ಲಿದೆ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ವಿಶ್ವದಾದ್ಯಂತ ಭಾರತದ ಬಗ್ಗೆ ಗೌರವ ಹೆಚ್ಚಿದೆ. ಇದನ್ನು ದೊಡ್ಡ ನಾಯಕರು ಹೇಳುತ್ತಿದ್ದಾರೆ, ಪ್ರಧಾನಿ ಮೋದಿ ಬಗ್ಗೆ ಇಟಲಿ ಪ್ರಧಾನಿ ಹೇಳಿದ್ದನ್ನ ರಾಹುಲ್ ಗಾಂಧಿ ಕೇಳಬೇಕು ಎಂದು ಹೇಳಿದ್ದಾರೆ.

ಮೂರು ರಾಜ್ಯಗಳ ಚುನಾವಣ ಫಲಿತಾಂಶವು ಕಾಂಗ್ರೆಸನ್ನು ಮತ್ತೊಮ್ಮೆ ಅಳಿಸಿಹಾಕಿದೆ ಎಂಬುದನ್ನು ತೋರಿಸುತ್ತದೆ. ಕಾಂಗ್ರೆಸ್ ಜನಾದೇಶವನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಮತ್ತು ನಿನ್ನೆಯ ಫಲಿತಾಂಶವು ಜನರು ಪ್ರಧಾನಿ ಮೋದಿಯನ್ನು ನಂಬುತ್ತಾರೆ ಎಂಬುದನ್ನು ತೋರಿಸುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?