ದೇಶ

ಮೇಘಾಲಯ ನೂತನ ಸಿಎಂ ಆಗಿ ಮಾರ್ಚ್ 7 ರಂದು ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ

Srinivasamurthy VN

ನವದೆಹಲಿ: ಮೇಘಾಲಯದ ನೂತನ ಸಿಎಂ ಆಗಿ ಮಾರ್ಚ್ 7ರಂದು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಅವರು ಮಾರ್ಚ್ 7 ರಂದು ಮೇಘಾಲಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 

ಈ ಕುರಿತು ಮಾಹಿಕಿ ನೀಡಿರುವ ಮಾಜಿ ಉಪಮುಖ್ಯಮಂತ್ರಿ ಮತ್ತು ಎನ್‌ಪಿಪಿ ಶಾಸಕ ಪ್ರೆಸ್ಟೋನ್ ಟೈನ್‌ಸಾಂಗ್ ಅವರು, ಪ್ರಮಾಣ ವಚನ ಸ್ವೀಕಾರ ಸಮಾರಂಭವು ಮಾರ್ಚ್ 7 ರಂದು ನಡೆಯಲಿದೆ ಎಂದು ತಿಳಿಸಿದ್ದಾರೆ.

"ಇಂದು ನಾವು ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ ಮತ್ತು ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದೇವೆ. ನಮ್ಮ ಬಳಿ ಸಾಕಷ್ಟು ಶಾಸಕರ ಸಂಖ್ಯೆಯಿದೆ" ಎಂದು ಪ್ರೆಸ್ಟೋನ್ ಟೈನ್ಸಾಂಗ್ ಹೇಳಿದರು.

ಎನ್‌ಪಿಪಿ ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಅವರು ಶುಕ್ರವಾರ ಶಿಲ್ಲಾಂಗ್‌ನ ರಾಜಭವನದಲ್ಲಿ ಮೇಘಾಲಯ ರಾಜ್ಯಪಾಲ ಫಾಗು ಚೌಹಾಣ್ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು ಮತ್ತು ಇದೇ ವೇಳೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ಕಾನ್ರಾಡ್ ಸಂಗ್ಮಾ ಅವರೊಂದಿಗೆ ಹೊಸದಾಗಿ ಚುನಾಯಿತರಾದ ಒಟ್ಟು 29 ಶಾಸಕರು ರಾಜಭವನದಲ್ಲಿ ಉಪಸ್ಥಿತರಿದ್ದರು. ಅವರಲ್ಲಿ 26 ಶಾಸಕರು ಎನ್‌ಪಿಪಿ, ಇಬ್ಬರು ಶಾಸಕರು ಬಿಜೆಪಿ ಮತ್ತು ಒಬ್ಬ ಸ್ವತಂತ್ರ ಶಾಸಕರಾಗಿದ್ದಾರೆ ಎಂದು ತಿಳಿದುಬಂದಿದೆ.

SCROLL FOR NEXT