ದೇಶ

ಕೋವಿಡ್-19: 97 ದಿನಗಳ ಬಳಿಕ ಭಾರತದಲ್ಲಿ ಮೊದಲ ಬಾರಿಗೆ ಒಂದೇ ದಿನ 300ಕ್ಕೂ ಅಧಿಕ ಸೋಂಕು ಪ್ರಕರಣ ವರದಿ

Srinivasamurthy VN

ನವದೆಹಲಿ: ಸಂಪೂರ್ಣ ಕ್ಷೀಣವಾಗಿದ್ದ ಮಾರಕ ಕೋವಿಡ್ ಸೋಂಕು 97 ದಿನಗಳ ಬಳಿಕ ಮತ್ತೆ ಭಾರತದಲ್ಲಿ ಸುದ್ದಿಗೆ ಗ್ರಾಸವಾಗಿದ್ದು, ಕಳೆದ 24 ಗಂಟೆಗಳಲ್ಲಿ 300ಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿವೆ.

ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ದೈನಂದಿನ ಕೋವಿಡ್ ಅಂಕಿ-ಅಂಶಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 334 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. ಆ ಮೂಲಕ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 2,686ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಅಂತೆಯೇ ಇದೇ ಅವಧಿಯಲ್ಲಿ ಮೂರು ಕೋವಿಡ್ ಸಾವುಗಳು ದಾಖಲಾಗಿದ್ದು, 2 ಮಹಾರಾಷ್ಟ್ರದಲ್ಲಿ ಮತ್ತು ಒಂದು ಕೇರಳದಲ್ಲಿ ವರದಿಯಾಗಿದೆ. ಆ ಮೂಲಕ ಕೋವಿಡ್ ಗೆ  ಬಲಿಯಾದವರ ಸಂಖ್ಯೆ 5,30,775ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 4,46,87,496ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

ದೇಶದಲ್ಲಿನ ಕೋವಿಡ್ ಚೇತರಿಕೆ ಪ್ರಮಾಣ ಶೇ.98.80ರಷ್ಟಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
 

SCROLL FOR NEXT