ಮನೀಶ್ ಸಿಸೋಡಿಯಾ 
ದೇಶ

ದೆಹಲಿ ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ಸಿಬಿಐ ಕಸ್ಟಡಿ ಇನ್ನೆರಡು ದಿನ ವಿಸ್ತರಿಸಿ ನ್ಯಾಯಾಲಯ ಆದೇಶ

ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಸಿಬಿಐ ಕಸ್ಟಡಿ ಅವಧಿಯನ್ನು ಮಾರ್ಚ್ 6ರವರೆಗೆ ವಿಸ್ತರಿಸಿ ಶನಿವಾರ ರೋಸ್ ಅವಿನ್ಯೂ ಕೋರ್ಟ್  ಆದೇಶ ನೀಡಿದೆ.

ನವದೆಹಲಿ: ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಸಿಬಿಐ ಕಸ್ಟಡಿ ಅವಧಿಯನ್ನು ಮಾರ್ಚ್ 6ರವರೆಗೆ ವಿಸ್ತರಿಸಿ ಶನಿವಾರ ರೋಸ್ ಅವಿನ್ಯೂ ಕೋರ್ಟ್  ಆದೇಶ ನೀಡಿದೆ.

ಐದು ದಿನಗಳ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶ ಎಂಕೆ ನಾಗ್ ಪಾಲ್ ಅವರ ಮುಂದೆ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಇಂದು ಹಾಜರುಪಡಿಸಿತು.

ಕಸ್ಟಡಿ ಅವಧಿಯನ್ನು ವಿಸ್ತರಿಸುವಂತೆ ಕೇಂದ್ರೀಯ ತನಿಖಾ ಸಂಸ್ಥೆ ನ್ಯಾಯಾಧೀಶರ ಬಳಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ, ಇನ್ನೆರೆಡು ದಿನ ಸಿಬಿಐ ಕಸ್ಟಡಿಗೆ ಒಪ್ಪಿಸಿತು.

ರೋಸ್ ಅವಿನ್ಯೂ ಕೋರ್ಟ್ ಆವರಣದ  ಒಳಗೆ ಹಾಗೂ ಹೊರಗೆ ಭಾರೀ ಭದ್ರತೆ ಕಲ್ಪಿಸಲಾಗಿತ್ತು. ಕೋರ್ಟ್ ಆವರಣದ ಹೊರಗೆ ಭಾರೀ ಸಂಖ್ಯೆಯಲ್ಲಿ ನೆರೆದಿದ್ದ ಆಮ್ ಆದ್ಮಿ ಪಕ್ಷದ ಬೆಂಬಲಿಗರು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. 

ಈಗ ರದ್ದಾಗಿರುವ 2021-22ರ  ಮದ್ಯ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಭಾನುವಾರ ಸಂಜೆ ಸಿಸೋಡಿಯಾ ಅವರನ್ನು ಬಂಧಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT