ತುನಿಶಾ ಶರ್ಮಾ - ಶೀಜನ್ ಖಾನ್‌ 
ದೇಶ

ತುನಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ: ನಟ ಶೀಜನ್ ಖಾನ್‌ಗೆ ಜಾಮೀನು

ಸಹ ನಟಿ ತುನಿಶಾ ಶರ್ಮಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತನಾಗಿರುವ ನಟ ಶೀಜನ್ ಖಾನ್ ಅವರಿಗೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲಾ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ.

ಮುಂಬೈ: ಸಹ ನಟಿ ತುನಿಶಾ ಶರ್ಮಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತನಾಗಿರುವ ನಟ ಶೀಜನ್ ಖಾನ್ ಅವರಿಗೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲಾ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ.

ಸದ್ಯ ನ್ಯಾಯಾಂಗ ಬಂಧನದಲ್ಲಿರುವ 28 ವರ್ಷದ ಶೀಜನ್ ಖಾನ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆರ್.ಡಿ.ದೇಶಪಾಂಡೆ ಅವರು, 1,00,000 ರೂ. ಶ್ಯೂರಿಟಿ ಮೇಲೆ ಆರೋಪಿಗೆ ಜಾಮೀನು ನೀಡಿದ್ದಾರೆ. 

ನಟನಿಗೆ ಪಾಸ್‌ಪೋರ್ಟ್‌ ಒಪ್ಪಿಸುವಂತೆ ಕೋರ್ಟ್‌ ಆದೇಶ ನೀಡಿದ್ದು, ನ್ಯಾಯಾಲಯದಿಂದ ಪೂರ್ವಾನುಮತಿ ಪಡೆಯದೆ ದೇಶ ತೊರೆಯದಂತೆ ಸೂಚಿಸಿದೆ.

ವಕೀಲರಾದ ಶೈಲೇಂದ್ರ ಮಿಶ್ರಾ ಮತ್ತು ಶರದ್ ರೈ ಅವರು ಆರೋಪಿ ಶೀಜನ್ ಖಾನ್ ಪರವಾಗಿ ವಾದಿಸಿದ್ದರು.

ಡಿಸೆಂಬರ್ 24, 2022 ರಂದು ಪಾಲ್ಘರ್‌ನ ವಾಲಿವ್ ಬಳಿ ಟಿವಿ ಧಾರಾವಾಹಿಯ ಸೆಟ್‌ನಲ್ಲಿ ತುನಿಶಾ ಶರ್ಮಾ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಶರ್ಮಾ ಅವರ ತಾಯಿ ನೀಡಿದ ದೂರಿನ ಆಧಾರದ ಮೇಲೆ ನಟ ಶೀಜನ್ ಖಾನ್(28) ಅವರನ್ನು ಮರುದಿನ ಬಂಧಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT