ಸಾಂದರ್ಭಿಕ ಚಿತ್ರ 
ದೇಶ

20ಕ್ಕೂ ಅಧಿಕ ಕೋತಿಗಳ ಹಿಂಡು ದಾಳಿ ನಡೆಸಿ ತೆಲಂಗಾಣದ 70 ವರ್ಷದ ಮಹಿಳೆ ಸಾವು

ತೆಲಂಗಾಣದಲ್ಲಿ 20ಕ್ಕೂ ಹೆಚ್ಚು ಕೋತಿಗಳ ಹಿಂಡಿನ ದಾಳಿಗೆ ಸಿಲುಕಿ 70 ವರ್ಷದ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ.  ಸಾವಿಗೀಡಾದವರನ್ನು ಕಾಮರೆಡ್ಡಿ ಜಿಲ್ಲೆಯ ರಾಮರೆಡ್ಡಿ ಗ್ರಾಮದ ಚಟರಬೋಯಿನಾ ನರಸವ್ವ ಎಂದು ಗುರುತಿಸಲಾಗಿದೆ.

ಹೈದರಾಬಾದ್: ತೆಲಂಗಾಣದಲ್ಲಿ 20ಕ್ಕೂ ಹೆಚ್ಚು ಕೋತಿಗಳ ಹಿಂಡಿನ ದಾಳಿಗೆ ಸಿಲುಕಿ 70 ವರ್ಷದ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ.  ಸಾವಿಗೀಡಾದವರನ್ನು ಕಾಮರೆಡ್ಡಿ ಜಿಲ್ಲೆಯ ರಾಮರೆಡ್ಡಿ ಗ್ರಾಮದ ಚಟರಬೋಯಿನಾ ನರಸವ್ವ ಎಂದು ಗುರುತಿಸಲಾಗಿದೆ.

ಸಂತ್ರಸ್ತೆ ಶುಕ್ರವಾರ ತನ್ನ ಮನೆಯಲ್ಲಿ ಪಾತ್ರೆಗಳನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಘಟನೆ ನಡೆದಿದೆ.  ಈ ವೇಳೆ ಕಿರಿಯ ಮಗಳು ಸುಗುಣ ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳಿದ್ದರಿಂದ ಸಂತ್ರಸ್ತೆ ಮನೆಯಲ್ಲಿ ಒಬ್ಬರೇ ಇದ್ದರು ಎಂದು ಸ್ಥಳೀಯ ಮೂಲಗಳು ತಿಳಿಸಿವೆ. 

ನರಸವ್ವ ಸಹಾಯಕ್ಕಾಗಿ ಕೂಗಿಕೊಂಡರೂ, ಭಯಭೀತರಾದ ನೆರೆಹೊರೆಯವರು ಆಕೆಯನ್ನು ರಕ್ಷಿಸಲು ಯಾವುದೇ ಪ್ರಯತ್ನ ಮಾಡಿಲ್ಲ. ಮಂಗಗಳು ಅಲ್ಲಿಂದ ತೆರಳುವವರೆಗೂ ನೆರೆಹೊರೆಯವರು ಬಾಗಿಲು ಹಾಕಿಕೊಂಡು ಮನೆಯೊಳಗೆ ಹೋಗಿದ್ದಾರೆ. ದಾಳಿಯಿಂದಾಗಿ ವೃದ್ಧೆಯ ಎದೆ, ಬೆನ್ನು ಮತ್ತು ಕೈಕಾಲುಗಳಿಗೆ ಗಂಭೀರ ಗಾಯಗಳಾಗಿವೆ.

ಸ್ವಲ್ಪ ಸಮಯದ ನಂತರ ಸುಗುಣ ಮನೆಗೆ ಮರಳಿದ ನಂತರವೇ ವೃದ್ಧೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನರಸವ್ವ ಶನಿವಾರ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ