ಸಾಂದರ್ಭಿಕ ಚಿತ್ರ 
ದೇಶ

ಕುಡಿದ ಅಮಲಿನಲ್ಲಿ ಅಮೆರಿಕನ್ ಏರ್‌ಲೈನ್ ವಿಮಾನದಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ

ನ್ಯೂಯಾರ್ಕ್-ನವದೆಹಲಿ ಅಮೆರಿಕನ್ ಏರ್‌ಲೈನ್ಸ್ ವಿಮಾನದ ಪ್ರಯಾಣಿಕರೊಬ್ಬರು ಕುಡಿದ ಅಮಲಿನಲ್ಲಿ ವಿಮಾನದಲ್ಲಿದ್ದ ಸಹ ಪುರುಷ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಭಾನುವಾರ ಮೂಲಗಳು ತಿಳಿಸಿವೆ.

ನವದೆಹಲಿ: ನ್ಯೂಯಾರ್ಕ್-ನವದೆಹಲಿ ಅಮೆರಿಕನ್ ಏರ್‌ಲೈನ್ಸ್ ವಿಮಾನದ ಪ್ರಯಾಣಿಕರೊಬ್ಬರು ಕುಡಿದ ಅಮಲಿನಲ್ಲಿ ವಿಮಾನದಲ್ಲಿದ್ದ ಸಹ ಪುರುಷ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಭಾನುವಾರ ಮೂಲಗಳು ತಿಳಿಸಿವೆ.

ಶುಕ್ರವಾರ ರಾತ್ರಿ 9.16ಕ್ಕೆ ನ್ಯೂಯಾರ್ಕ್‌ನಿಂದ ಹೊರಟು 14 ಗಂಟೆ 26 ನಿಮಿಷಗಳ ಹಾರಾಟದ ನಂತರ ಶನಿವಾರ ರಾತ್ರಿ 10:12 ಕ್ಕೆ ಇಲ್ಲಿನ ಇಂದಿರಾಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆದ ವಿಮಾನ ಸಂಖ್ಯೆ ಎಎ292 ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. 

'ಆರೋಪಿ ಅಮೆರಿಕದ ವಿಶ್ವವಿದ್ಯಾಲಯದ ವಿದ್ಯಾರ್ಥಿ. ಮದ್ಯ ಸೇವಿಸಿದ ಸ್ಥಿತಿಯಲ್ಲಿದ್ದ ಆತ ಮಲಗಿದ್ದ ಜಾಗದಲ್ಲೇ ಮೂತ್ರ ವಿಸರ್ಜನೆ ಮಾಡಿದ್ದಾರೆ. ಅದು ಸೋರಿಕೆಯಾಗಿ ಸಹಪ್ರಯಾಣಿಕನ ಮೇಲೆ ಬಿದ್ದಿದೆ ಮತ್ತು ಅವರು ಸಿಬ್ಬಂದಿಗೆ ದೂರು ನೀಡಿದ್ದಾರೆ' ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ತನ್ನ ವೃತ್ತಿಜೀವನಕ್ಕೆ ಅಪಾಯವನ್ನುಂಟುಮಾಡುತ್ತದೆ ಎಂದು ವಿದ್ಯಾರ್ಥಿಯು ಕ್ಷಮೆಯಾಚಿಸಿದ ನಂತರ ಸಂತ್ರಸ್ತ ಪೊಲೀಸರಿಗೆ ವಿಷಯವನ್ನು ತಿಳಿಸಲು ಇಚ್ಚಿಸಲಿಲ್ಲ. ಆದರೆ, ವಿಮಾನಯಾನ ಸಂಸ್ಥೆ ಇದನ್ನು ಗಂಭೀರವಾಗಿ ಪರಿಗಣಿಸಿ ಐಜಿಐ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ)ಗೆ ವರದಿ ಮಾಡಿದೆ.

ವಿಮಾನದಲ್ಲಿ ನಡೆದ ಘಟನೆಯ ಬಗ್ಗೆ ಸಿಬ್ಬಂದಿ ಪೈಲಟ್‌ಗೆ ಮಾಹಿತಿ ನೀಡಿದ್ದಾರೆ. ಅವರು ಎಟಿಸಿಗೆ ವಿಷಯವನ್ನು ವರದಿ ಮಾಡಿದ್ದಾರೆ. ಇದು ಸಿಐಎಸ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದೆ. ಬಳಿಕ, ಆರೋಪಿ ಪ್ರಯಾಣಿಕನನ್ನು ದೆಹಲಿ ಪೊಲೀಸರಿಗೆ ಒಪ್ಪಿಸಿದ್ದಾರೆ.

'ಘಟನೆ ಬೆಳಕಿಗೆ ಬಂದ ನಂತರ ಸಿಐಎಸ್‌ಎಫ್‌ನೊಂದಿಗೆ ಏರ್‌ಲೈನ್‌ನ ಭದ್ರತಾ ತಂಡವು ಕಾರ್ಯಾಚರಣೆ ಕೈಗೊಂಡಿದೆ. ವಿಮಾನ ಲ್ಯಾಂಡ್ ಆದ ತಕ್ಷಣ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಯಿತು. ಪೊಲೀಸರು ಸಂಬಂಧಪಟ್ಟ ವ್ಯಕ್ತಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳುತ್ತಿದ್ದಾರೆ' ಎಂದು ವಿಮಾನ ನಿಲ್ದಾಣದ ಇನ್ನೊಂದು ಮೂಲವು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದೆ.

ನಾಗರಿಕ ವಿಮಾನಯಾನ ನಿಯಮಗಳ ಪ್ರಕಾರ, ಪ್ರಯಾಣಿಕರು ಅಶಿಸ್ತಿನ ವರ್ತನೆ ತೋರಿ ತಪ್ಪಿತಸ್ಥರೆಂದು ಕಂಡುಬಂದರೆ, ಕ್ರಿಮಿನಲ್ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳುವುದರ ಜೊತೆಗೆ, ಅಪರಾಧದ ಮಟ್ಟವನ್ನು ಅವಲಂಬಿಸಿ ನಿರ್ದಿಷ್ಟ ಅವಧಿಗೆ ವಿಮಾನಯಾನ ಮಾಡುವುದನ್ನು ನಿಷೇಧಿಸಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT