ದೇಶ

ಭಾರತಕ್ಕೆ ಆಸ್ಟ್ರೇಲಿಯಾ ಪ್ರಧಾನಿ ಭೇಟಿ, ಅಪರೂಪದ ಭೂ ಖನಿಜ ವಲಯಕ್ಕೆ ಸಂಬಂಧಿಸಿದ ಒಪ್ಪಂದ ಸಾಧ್ಯತೆ

Srinivas Rao BV

ನವದೆಹಲಿ: ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಆಲ್ಬನೀಸ್ ಭಾರತಕ್ಕೆ ಭೇಟಿ ನೀಡುತ್ತಿದ್ದು, ಅಪರೂಪದ ಖನಿಜ ವಲಯಕ್ಕೆ ಸಂಬಂಧಿಸಿದಂತೆ ಮಹತ್ವದ ಒಪ್ಪಂದ ಏರ್ಪಡುವ ಸಾಧ್ಯತೆ ಇದೆ.

ಆಸ್ಟ್ರೇಲಿಯಾ ರಾಭಾರಿ ಬಾರ್ರಿ ಓ ಫರ್ರೆಲ್ ಈ ಬಗ್ಗೆ ಮಾತನಾಡಿದ್ದು, ಆಸ್ಟ್ರೇಲಿಯಾದಲ್ಲಿ ಪ್ರಮುಖ ಖನಿಜ ನಿಕ್ಷೇಪಗಳಿದ್ದು, ಭಾರತ ನಂಬಿಕಸ್ಥ ಹಾಗೂ ವಿಶ್ವಸನೀಯ ಪಾಲುದಾರ ರಾಷ್ಟ್ರವಾಗಿದೆ. ಈ ವಲಯದಲ್ಲಿ ಸಹಕಾರದ ಬಗ್ಗೆ ಮಾ.08 ರಂದು ಪಿಎಂ ಆಲ್ಬನೀಸ್ ಅವರು ಭಾರತಕ್ಕೆ ಭೇಟಿ ನೀಡಿದಾಗ ಮಾತುಕತೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಆಸ್ಟ್ರೇಲಿಯಾ ಪ್ರಧಾನಿ ಅಹ್ಮದಾಬಾದ್ ಗೆ ಬಂದಿಳಿಯಲಿದ್ದು, ಹೋಲಿ ಸಂಭ್ರಮಾಚರಣೆಯಲ್ಲಿಯೂ ಭಾಗಿಯಾಗಲಿದ್ದಾರೆ. ಅಷ್ಟೇ ಅಲ್ಲದೇ ಪ್ರಧಾನಿ ಮೋದಿ ಅವರೊಂದಿಗೆ ಭಾರತ- ಆಸ್ಟ್ರೇಲಿಯಾ ಕ್ರಿಕೆಟ್ ಟೆಸ್ಟ್ ಪಂದ್ಯವನ್ನೂ ವೀಕ್ಷಿಸಲಿದ್ದಾರೆ ನಂತರ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ.

ಆಸ್ಟ್ರೇಲಿಯಾ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಆಲ್ಬನೀಸ್ ಅವರಿಗೆ ಇದು ಮೊದಲ ಭಾರತ ಪ್ರವಾಸವಾಗಿರಲಿದೆ.

SCROLL FOR NEXT