ದೇಶ

ತ್ರಿಪುರಾ ರಾಜ್ಯಪಾಲರನ್ನು ಭೇಟಿ ಮಾಡಿದ ಮಾಣಿಕ್ ಸಹಾ, ಸರ್ಕಾರ ರಚನೆಗೆ ಹಕ್ಕು ಮಂಡನೆ

Lingaraj Badiger

ಅಗರ್ತಲ: ಎರಡನೇ ಬಾರಿ ತ್ರಿಪುರಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಿಜೆಪಿ ನಾಯಕ ಮಾಣಿಕ್ ಸಹಾ ಅವರು ಸೋಮವಾರ ಸಂಜೆ ರಾಜ್ಯಪಾಲ ಸತ್ಯದೇವ್ ನಾರಾಯಣ್ ಆರ್ಯ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಣಿಕ್ ಸಹಾ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಮತ್ತು ಈಶಾನ್ಯ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಯಿತು.

ಸಿಎಂ ಆಗಿ ಮಾಣಿಕ್ ಸಹಾ ಅವರ ಆಯ್ಕೆಯನ್ನು ಪಕ್ಷದ ಎಲ್ಲಾ ಶಾಸಕರು ಸರ್ವಾನುಮತದಿಂದ ಅನುಮೋದಿಸಿದ್ದಾರೆ ಎಂದು ಶಾಸಕಾಂಗ ಸಭೆಯ ನಂತರ ಬಿಜೆಪಿಯ ವಕ್ತಾರರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮಾಣಿಕ್ ಸಹಾ ಅವರು ಮಾರ್ಚ್ 8 ರಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಲಿದ್ದಾರೆ.

SCROLL FOR NEXT