ಶರದ್ ಪವಾರ್ 
ದೇಶ

ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಎಂವಿಎ ಒಟ್ಟಾಗಿ ಸ್ಪರ್ಧಿಸಲಿದೆ: ಶರದ್ ಪವಾರ್

ಮಹಾರಾಷ್ಟ್ರದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ಮುಂಬರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಒಟ್ಟಾಗಿ ಸ್ಪರ್ಧಿಸಲಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸೋಮವಾರ ಹೇಳಿದ್ದಾರೆ.

ಪುಣೆ: ಮಹಾರಾಷ್ಟ್ರದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ಮುಂಬರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಒಟ್ಟಾಗಿ ಸ್ಪರ್ಧಿಸಲಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಹೇಳಿದ್ದಾರೆ.

ಇಂದು ಪುಣೆ ನಗರದ ಕಸ್ಬಾ ಪೇಠ್ ವಿಧಾನಸಭಾ ಕ್ಷೇತ್ರದ ನೂತನ ಕಾಂಗ್ರೆಸ್ ಶಾಸಕ ರವೀಂದ್ರ ಧಾಂಗೇಕರ್ ಅವರ ನಿವಾಸಕ್ಕೆ ಭೇಟಿ ನೀಡಿದ ನಂತರ ಪವಾರ್ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಳೆದ ಹಲವು ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿದ್ದ ಕಸ್ಬಾ ಪೇಠ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಧಾಂಗೇಕರ್ ಅವರು ಸಾಮಾನ್ಯ ಜನರಿಂದ ಆಯ್ಕೆಯಾಗಿದ್ದಾರೆ ಎಂದು ಪವಾರ್ ಹೇಳಿದ್ದಾರೆ.

"ಎಂವಿಎ ಮಿತ್ರ ಪಕ್ಷಗಳು ಒಟ್ಟಿಗೆ ಇರುವುದನ್ನು ಖಚಿತಪಡಿಸಿಕೊಳ್ಳುವುದು, ಜಂಟಿ ನಿರ್ಧಾ ತೆಗೆದುಕೊಳ್ಳುವುದು ಮತ್ತು ರಾಜ್ಯ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಒಂದಾಗಿ ಚುನಾವಣೆ ಎದುರಿಸಲಾಗುವುದು" ಎಂದು ಎನ್ ಸಿಪಿ ಮುಖ್ಯಸ್ಥರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ