ಮನೀಶ್ ಸಿಸೋಡಿಯಾ ಅವರನ್ನು ಜೈಲಿಗೆ ಕರೆದೊಯ್ಯುತ್ತಿರುವ ಪೊಲೀಸರ ಚಿತ್ರ 
ದೇಶ

ತಿಹಾರ್ ಜೈಲಿನಲ್ಲಿ ಇಡಿಯಿಂದ ಸಿಸೋಡಿಯಾ ವಿಚಾರಣೆ; ದೆಹಲಿ ಅಬಕಾರಿ ಪ್ರಕರಣದಲ್ಲಿ ಮತ್ತೊಬ್ಬ ಉದ್ಯಮಿ ಬಂಧನ

ದೆಹಲಿ ಅಬಕಾರಿ ನೀತಿ 2021-22ರಲ್ಲಿ ಕಿಕ್ ಬ್ಯಾಕ್ ಹಣ ಪಡೆದು ಕೆಲವರಿಗೆ ಅನುಕೂಲವಾಗುವಂತೆ ನೀತಿ ರೂಪಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರನ್ನು ಇಡಿ ಇದೇ ಮೊದಲ ಬಾರಿಗೆ ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಲಿದೆ.

ನವದೆಹಲಿ:  ದೆಹಲಿ ಅಬಕಾರಿ ನೀತಿ 2021-22ರಲ್ಲಿ ಕಿಕ್ ಬ್ಯಾಕ್ ಹಣ ಪಡೆದು ಕೆಲವರಿಗೆ ಅನುಕೂಲವಾಗುವಂತೆ ನೀತಿ ರೂಪಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರನ್ನು ಇಡಿ ಇದೇ ಮೊದಲ ಬಾರಿಗೆ ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಲಿದೆ.

ದೆಹಲಿ ಅಬಕಾರಿ ನೀತಿಯಿಂದ ಲಾಭ ಪಡೆದ ಮದ್ಯದ ವ್ಯಾಪಾರಿಗಳು,ರಾಜಕಾರಣಿಗಳು, ಸರ್ಕಾರಿ ನೌಕರರು ಮತ್ತು ಮಧ್ಯವರ್ತಿಗಳಿಗೆ  ಲಂಚವಾಗಿ ಹಣ ನೀಡಿದ್ದಾರೆ ಎನ್ನುವ ಆರೋಪವಿದೆ. ಅಲ್ಲದೆ, ಕಿಕ್ ಬ್ಯಾಕ್ ಹಣ ವರ್ಗಾವಣೆಯಲ್ಲಿ ಪ್ರಮುಖ ಪಾತ್ರ ವಹಿರುವ ಮತ್ತೋರ್ವ ಉದ್ಯಮಿ  ಉದ್ಯಮಿ ಅರುಣ್ ಪಿಳ್ಳೈ ಅವರನ್ನು ಇಡಿ ಬಂಧಿಸಿದೆ.

ಕಿಕ್ ಬ್ಯಾಕ್ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿ ಸಿಸೋಡಿಯಾ ಅವರನ್ನು ವಿಚಾರಣೆ ನಡೆಸಲು ಇಡಿ ಸೋಮವಾರ ಸಂಜೆ ವಿಶೇಷ ಪಿಎಂಎಲ್‌ಎ ನ್ಯಾಯಾಧೀಶ ಎಂಕೆ ನಾಗ್ಪಾಲ್ ಅವರಿಂದ ಅನುಮತಿ ಪಡೆದುಕೊಂಡಿದೆ. 
ಸಿಬಿಐ ಎಫ್‌ಐಆರ್‌ನಲ್ಲಿ ಆರೋಪಿ ನಂ.1 ಎಂದು ಹೆಸರಿಸಲಾಗಿರುವ ಸಿಸೋಡಿಯಾ ಅವರನ್ನು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿಸಿದ್ದ  ಸಿಬಿಐ, ಆರು ದಿನಗಳ ಕಾಲ ವಿಚಾರಣೆಗೆ ಒಳಪಡಿಸಿದ ನಂತರ ಸಿಸೋಡಿಯಾ ಅವರನ್ನು ನ್ಯಾಯಾಂಗ ಬಂಧನದಲ್ಲಿ ತಿಹಾರ್ ಜೈಲಿಗೆ ಕಳುಹಿಸಲಾಗಿದೆ.

ಈ ಮಧ್ಯೆ ಈಗಾಗಲೇ ಸಿಬಿಐ ಆರೋಪಪಟ್ಟಿಯಲ್ಲಿ ಹೆಸರಿಸಲಾದ ಮತ್ತೊಬ್ಬ ಆರೋಪಿ ಅರುಣ್ ಪಿಳ್ಳೈ ಅವರನ್ನು ಇಡಿ ಮಂಗಳವಾರ ಬೆಳಿಗ್ಗೆ ಬಂಧಿಸಿದೆ. ದಕ್ಷಿಣ ಗ್ರೂಪ್ ನ ಮದ್ಯ ವ್ಯಾಪಾರಿಗಳನ್ನು ಪ್ರತಿನಿಧಿಸುತ್ತಿದ್ದ ಈತ ಕಿಕ್ ಬ್ಯಾಕ್ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ. ರಾಜಕಾರಣಿಗಳಾದ ಮಾಗುಂಟ ಶ್ರೀನಿವಾಸುಲು ರೆಡ್ಡಿ, ರಾಘವ್ ಮಾಗುಂಟ, ಶರತ್ ರೆಡ್ಡಿ ಮತ್ತು ತೆಲಂಗಾಣ ಸಿಎಂ ಪುತ್ರಿ ಕೆ ಕವಿತಾ ಸೇರಿದಂತೆ  ಪ್ರಮುಖ ವ್ಯಕ್ತಿಗಳು ದಕ್ಷಿಣ ಗ್ರೂಪ್ ನ ಮದ್ಯ ವ್ಯಾಪಾರಿಗಳಾಗಿದ್ದಾರೆ ಎಂದು ಇಡಿ ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!