ಎಸ್ ದಿನಕರ್ 
ದೇಶ

ಇಂದೋರ್‌ನ ಹೋಟೆಲ್‌ವೊಂದರಲ್ಲಿ ತಂಗಿದ್ದ ಹಿರಿಯ ಕ್ರೀಡಾ ಪತ್ರಕರ್ತ ದಿನಕರ್ ಸಾವು

ಆಂಗ್ಲ ದಿನ ಪತ್ರಿಕೆಯ ಹಿರಿಯ ಕ್ರೀಡಾ ಪತ್ರಕರ್ತ ಇಂದೋರ್‌ನ ಹೋಟೆಲ್‌ನಲ್ಲಿ ನಿಧನರಾಗಿದ್ದು ಅವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಎನ್ನಲಾಗಿದೆ. 

ಇಂದೋರ್: ಆಂಗ್ಲ ದಿನ ಪತ್ರಿಕೆಯ ಹಿರಿಯ ಕ್ರೀಡಾ ಪತ್ರಕರ್ತ ಇಂದೋರ್‌ನ ಹೋಟೆಲ್‌ನಲ್ಲಿ ನಿಧನರಾಗಿದ್ದು ಅವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಎನ್ನಲಾಗಿದೆ. 

ಪೊಲೀಸ್ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು, ದಿ ಹಿಂದೂ ಪತ್ರಿಕೆಯ ಹಿರಿಯ ಉಪ ಸಂಪಾದಕ 57 ವರ್ಷದ ಎಸ್.ಕೆ ದಿನಕರ್ ಸೋಮವಾರ ವಿಜಯ್ ನಗರ ಪ್ರದೇಶದ ಹೋಟೆಲ್ ನಲ್ಲಿ ಅಸ್ವಸ್ಥರಾಗಿದ್ದರು. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ವೈದ್ಯರು ಅವರು ಸಾವನ್ನಪ್ಪಿರುವುದಾಗಿ ತಿಳಿಸಿದರು.

ಪೊಲೀಸರು ದಿನಕರ್ ಅವರ ದೇಹದ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಅವರ ಸಾವಿನ ತನಿಖೆ ನಡೆಯುತ್ತಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಏತನ್ಮಧ್ಯೆ, ಬಾರ್ಡರ್-ಗವಾಸ್ಕರ್ ಟ್ರೋಫಿಯ ಕೊನೆಯ ಪಂದ್ಯ ಅಹಮದಾಬಾದ್ ನಲ್ಲಿ ನಡೆಯಲಿದೆ. ಇಂದೋರ್ ನಲ್ಲಿ ನಡೆದಿದ್ದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯವನ್ನು ದಿನಕರ್ ವರದಿ ಮಾಡಿದ್ದರು ಎಂದು ದಿನಕರ್ ಸಹೋದ್ಯೋಗಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ 9ರಿಂದ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಅವರು ಇಂದೋರ್‌ ನಿಂದ ಅಹಮದಾಬಾದ್ ಗೆ ತೆರಳಬೇಕಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!