ತ್ರಿಪುರಾ ಸಿಎಂ ಆಗಿ ಮಾಣಿಕ್ ಸಹಾ ಪ್ರಮಾಣ ವಚನ ಸ್ವೀಕಾರ 
ದೇಶ

2ನೇ ಬಾರಿಗೆ ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಪ್ರಮಾಣವಚನ

ಸತತ ಎರಡನೇ ಅವಧಿಗೆ ತ್ರಿಪುರಾದ ಮುಖ್ಯಮಂತ್ರಿಯಾಗಿ ಡಾ ಮಾಣಿಕ್ ಸಹಾ ಇಂದು ಪ್ರಮಾಣವಚನ ಸ್ವೀಕರಿಸಿದರು.

ಅಗರ್ತಲಾ: ಸತತ ಎರಡನೇ ಅವಧಿಗೆ ತ್ರಿಪುರಾದ ಮುಖ್ಯಮಂತ್ರಿಯಾಗಿ ಡಾ ಮಾಣಿಕ್ ಸಹಾ ಇಂದು ಪ್ರಮಾಣವಚನ ಸ್ವೀಕರಿಸಿದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಡಾ ಮಾಣಿಕ್ ಸಹಾ ಅವರು ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಮಂಗಳವಾರವೇ ರಾಜ್ಯಕ್ಕೆ ಆಗಮಿಸಿದ್ದಾರೆ. ಅಗರ್ತಲಾದ ವಿವೇಕಾನಂದ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. 

ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡ, ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮತ್ತು ಸಿಕ್ಕಿಂ ಮುಖ್ಯಮಂತ್ರಿ ಪಿಎಸ್ ತಮಾಂಗ್ ಕೂಡ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಬಿಜೆಪಿಯ ಬಿಪ್ಲಬ್ ದೇಬ್ ಕೂಡ ಇದ್ದರು. ಹಿಂದಿನ ಸರ್ಕಾರದಿಂದ ನಾಲ್ವರು ಹೊಸ ಸಚಿವರನ್ನು ಉಳಿಸಿಕೊಳ್ಳಲಾಗಿದ್ದು, ರತನ್ ಲಾಲ್ ನಾಥ್, ಪ್ರಣಜಿತ್ ಸಿಂಗ್ ರಾಯ್, ಶಾಂತಾ ಚಕ್ಮಾ ಮತ್ತು ಸುಶಾಂತ ಚೌಧರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಂತೆಯೇ ಬಿಜೆಪಿ ತನ್ನ ಶ್ರೇಣಿಯೊಳಗೆ ಮೂರು ಹೊಸ ಮಂತ್ರಿಗಳನ್ನು ಸೇರ್ಪಡೆಗೊಳಿಸಿದ್ದು, ಬಿಪ್ಲಬ್ ದೇಬ್ ಅವರ ನಿಕಟವರ್ತಿ ಟಿಂಕು ರಾಯ್, ಬಿಜೆಪಿಯ ಪರಿಶಿಷ್ಟ ಪಂಗಡಗಳ ಮೋರ್ಚಾದ ಮುಖ್ಯಸ್ಥ ಬಿಕಾಶ್ ದೆಬ್ಬರ್ಮಾ ಮತ್ತು ಸುಧಾಂಶು ದಾಸ್ ಕೂಡ ಪ್ರಮಾಣ ವಚನ ಸ್ವೀಕಿಸಿದರು.

ರಾಜ್ಯದಲ್ಲಿ ಹೊಸದಾಗಿ ಚುನಾಯಿತರಾದ ಬಿಜೆಪಿ ಶಾಸಕರು ಸೋಮವಾರ ಶಾಸಕಾಂಗ ಪಕ್ಷದ ನಾಯಕನಾಗಿ ಸಹಾ ಹೆಸರನ್ನು ಸರ್ವಾನುಮತದಿಂದ ಅಂಗೀಕರಿಸಿದ್ದರು. ಇದರ ಬಳಿಕ ಅವರು ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ಡಾ.ಸಹಾ ಅವರೊಂದಿಗೆ ಶಾಸಕರು ಕೂಡ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಇತ್ತೀಚೆಗಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 60ರಲ್ಲಿ 32 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ತಿಪ್ರಾ ಮೋಥಾ 13 ಸ್ಥಾನಗಳನ್ನು ಪಡೆಯುವ ಮೂಲಕ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು.

ಮಾಣಿಕ್ ಸಹಾ 2016ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಅವರು ಮಾರ್ಚ್ 2022 ರಲ್ಲಿ ರಾಜ್ಯಸಭೆಗೆ ಆಯ್ಕೆಯಾದರು. 2022 ರಲ್ಲಿ ಬಿಪ್ಲಬ್ ದೇಬ್ ಬದಲಿಗೆ ಡಾ ಮಾಣಿಕ್ ಸಹಾ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು.  ಬಿಜೆಪಿಯಲ್ಲಿ ತಳಮಟ್ಟದಲ್ಲಿ ಕೆಲಸ ಮಾಡುತ್ತಿದ್ದ ಸಹಾ 2020 ರಲ್ಲಿ ರಾಜ್ಯದಲ್ಲಿ ಪಕ್ಷದ ಮುಖ್ಯಸ್ಥರಾಗಿದ್ದರು. ಆದಾಗ್ಯೂ ಅವರು ಮುಖ್ಯಮಂತ್ರಿಯಾಗುವ ಮೊದಲು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.  ಟೌನ್ ಬರ್ಡೋವಾಲಿ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಗೆದ್ದು  ಮುಖ್ಯಮಂತ್ರಿಯಾದರು. ಈ ವಿಧಾನಸಭಾ ಚುನಾವಣೆಯಲ್ಲಿಯೂ ಅದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಸಿಪಿಎಂ ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಿವೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT