ಯಾಂಕಾ ಗಾಂಧಿ ಪಿಎ ವಿರುದ್ಧ ಎಫ್‍ಐಆರ್ ದಾಖಲು 
ದೇಶ

ಜೀವ ಬೆದರಿಕೆ ಆರೋಪ: ಪ್ರಿಯಾಂಕಾ ಗಾಂಧಿ ಪಿಎ ವಿರುದ್ಧ ಎಫ್‍ಐಆರ್ ದಾಖಲು

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆಪ್ತ ಸಹಾಯಕ ತನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಬಿಗ್ ಬಾಸ್‍ ಸ್ಪರ್ಧಿ ಅರ್ಚನಾ ಗೌತಮ್ ಆರೋಪಿಸಿದ ಹಿನ್ನಲೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಮೀರತ್: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆಪ್ತ ಸಹಾಯಕ ತನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಬಿಗ್ ಬಾಸ್‍ ಸ್ಪರ್ಧಿ ಅರ್ಚನಾ ಗೌತಮ್ ಆರೋಪಿಸಿದ ಹಿನ್ನಲೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಬಿಗ್ ಬಾಸ್ 16ನೇ ಸೀಸನಿನ ಟಾಪ್ 5 ಫೈನಲಿಸ್ಟ್ ರಲ್ಲಿ ಒಬ್ಬರಾಗಿದ್ದ ಅರ್ಚನಾ ಗೌತಮ್ ಅವರು ಈ ಗಂಭೀರ ಆರೋಪ ಮಾಡಿದ್ದು, ಈ ಕುರಿತಂತೆ ಮೀರತ್‍ನ ಪರ್ತಾಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಫೇಸ್‍ಬುಕ್ ಲೈವ್‍ನಲ್ಲಿ ಘಟನೆಯ ಬಗ್ಗೆ ವಿವರವಾಗಿ ಮಾತನಾಡಿರುವ ಅವರು ಪ್ರಿಯಾಂಕಾ ಅವರ ಆಪ್ತ ಸಹಾಯಕ ಸಂದೀಪ್ ಸಿಂಗ್ ನನ್ನ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ ಎಂದು ದೂರಿದ್ದಾರೆ.

ಪ್ರಿಯಾಂಕಾ ಗಾಂಧಿಯವರ ಆಹ್ವಾನದ ಮೇರೆಗೆ ಕಾಂಗ್ರೆಸ್ ಮಹಾಧಿವೇಶನದಲ್ಲಿ ಪಾಲ್ಗೊಳ್ಳಲು ಫೆಬ್ರವರಿ 26 ರಂದು ಛತ್ತೀಸ್‍ಗಢದ ರಾಯ್‍ಪುರಕ್ಕೆ ತಮ್ಮ ಪುತ್ರಿ ಅರ್ಚನಾ ತೆರಳಿದ್ದ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿಸುವಂತೆ ಅವರ ಆಪ್ತ ಸಹಾಯಕರನ್ನು ಕೇಳಿಕೊಂಡಿದ್ದರು. ಆದರೆ, ಆಕೆಯನ್ನು ಪ್ರಿಯಾಂಕಾ ಗಾಂಧಿಗೆ ಪರಿಚಯಿಸಲು ನಿರಾಕರಿಸಿದ್ದ ಆತ, ಜಾತಿವಾದಿ ಪದಗಳು ಹಾಗೂ ಅವಾಚ್ಯ ಶಬ್ಧಗಳನ್ನು ಬಳಸಿ ಅರ್ಚನಾ ಜತೆ ಅಸಭ್ಯವಾಗಿ ಮಾತನಾಡಿದ್ದಾನೆ.ಇದಲ್ಲದೆ ಕೊಲೆ ಬೆದರಿಕೆಯನ್ನೂ ಹಾಕಿದ್ದಾನೆ ಎಂದು ಆರ್ಚನಾ ತಂದೆ ಗೌತಮ್ ಬುದ್ಧ ತಿಳಿಸಿದ್ದಾರೆ.

ಅರ್ಚನಾ ಅವರ ತಂದೆ ಗೌತಮ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮೀರತ್ ಎಸ್ಪಿ ಪಿಯೂಷ್ ಸಿಂಗ್ ತಿಳಿಸಿದ್ದಾರೆ. ಬಿಗ್ ಬಾಸ್ ಮಾಜಿ ಸ್ರ್ಪಧಿ ಮತ್ತು ಕಾಂಗ್ರೆಸ್ ನಾಯಕಿ ಅರ್ಚನಾ ಗೌತಮ್ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪಿಎ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT