ಅತಿಶಿ, ಸೌರಭ್ ಭಾರದ್ವಾಜ್ 
ದೇಶ

ದೆಹಲಿ ನೂತನ ಸಚಿವರಾಗಿ ಅತಿಶಿ, ಸೌರಭ್ ಭಾರದ್ವಾಜ್ ಪ್ರಮಾಣ; ಖಾತೆ ಹಂಚಿದ ಕೇಜ್ರಿವಾಲ್

ಎಎಪಿ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ಗುರುವಾರ ದೆಹಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. 

ನವದೆಹಲಿ: ಎಎಪಿ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ಗುರುವಾರ ದೆಹಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. 

ಇಂದು ದೆಹಲಿಯ ನಡೆದ ಸರಳ ಸಮಾರಂಭದಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಅತಿಶಿ ಹಾಗೂ ಸೌರಭ್ ಭಾರದ್ವಾಜ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ದೆಹಲಿ ವಿಧಾನಸಭೆ ಪ್ರತಿಪಕ್ಷ ನಾಯಕ ರಾಮವೀರ್ ಸಿಂಗ್ ಅವರ ಉಪಸ್ಥಿತರಿದ್ದರು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸಂಪುಟಕ್ಕೆ ಹೊಸದಾಗಿ ನೇಮಕಗೊಂಡ ಅತಿಶಿ ಅವರಿಗೆ ಶಿಕ್ಷಣ, ಲೋಕೋಪಯೋಗಿ, ವಿದ್ಯುತ್ ಮತ್ತು ಪ್ರವಾಸೋದ್ಯಮ ಖಾತೆಗಳನ್ನು ನೀಡಿದ್ದಾರೆ.

ಇನ್ನು ಸೌರಭ್ ಭಾರದ್ವಾಜ್ ಅವರಿಗೆ ಆರೋಗ್ಯ, ನೀರು ಮತ್ತು ಕೈಗಾರಿಕೆ ಹಾಗೂ ನಗರಾಭಿವೃದ್ಧಿಯನ್ನು ಕೇಜ್ರಿವಾಲ್ ಅವರು ಹಂಚಿಕೆ ಮಾಡಿದ್ದಾರೆ. 

ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಎಪಿಯ ಹಿರಿಯ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರಿಂದ ತೆರವಾದ ಸಚಿವ ಸ್ಥಾನಗಳನ್ನು ಈ ಇಬ್ಬರು ಶಾಸಕರಿಗೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!