ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಮತ್ತೆ ಸಿಸೋಡಿಯಾ ವಿಚಾರಣೆಗೆ ತಿಹಾರ್ ಜೈಲಿಗೆ ಇ.ಡಿ ತಂಡ ಭೇಟಿ

Ramyashree GN

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಮತ್ತೊಮ್ಮೆ ಪ್ರಶ್ನಿಸಲು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ತಿಹಾರ್ ಜೈಲಿಗೆ ತಲುಪಿದ್ದಾರೆ.

ತನಿಖಾ ಸಂಸ್ಥೆಯ ಮೂಲಗಳ ಪ್ರಕಾರ, ಸಿಸೋಡಿಯಾ ಅವರನ್ನು ಮೂರು ದಿನಗಳ ಕಾಲ ವಿಚಾರಣೆಗೊಳಪಡಿಸಲು ಅವರಿಗೆ ಅನುಮತಿ ಇದೆ ಎನ್ನಲಾಗಿದೆ.

ಇದಕ್ಕೂ ಮೊದಲು, ಸೌತ್ ಗ್ರೂಪ್‌ನಿಂದ ಪಕ್ಷ/ನಾಯಕರು ಹವಾಲಾ ಚಾನೆಲ್ ಮೂಲಕ ಪಡೆದ 100 ಕೋಟಿ ರೂ.ಗಳ ಕಿಕ್‌ಬ್ಯಾಕ್ ಕುರಿತು ಎಎಪಿ ನಾಯಕನನ್ನು ಇಡಿ ವಿಚಾರಣೆ ನಡೆಸಿತ್ತು.

ಹೈದರಾಬಾದ್ ಮೂಲದ ಉದ್ಯಮಿ ಅರುಣ್ ಪಿಳ್ಳೈ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರ ಬಗ್ಗೆಯೂ ವಿಚಾರಣೆ ನಡೆಸಲಾಗಿದೆ.

ಫೆಬ್ರುವರಿ 26 ರಂದು ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತು ಮತ್ತು ನಂತರ ರೌಸ್ ಅವೆನ್ಯೂ ಜಿಲ್ಲಾ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಅವರ ಜಾಮೀನು ಅರ್ಜಿಯು ಮಾರ್ಚ್ 10ರಂದು ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. 

SCROLL FOR NEXT