ದೇಶ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕರ್ನಾಟಕದ ಬೆಳವಣಿಗೆಯ ಪಥಕ್ಕೆ ಕೊಡುಗೆ ನೀಡುತ್ತದೆ: ಪ್ರಧಾನಿ ಮೋದಿ

Manjula VN

ನವದೆಹಲಿ: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಮುಖ ಯೋಜನೆಯಾಗಿದ್ದು, ಈ ಯೋಜನೆ ಕರ್ನಾಟಕದ ಬೆಳವಣಿಗೆಯ ಪಥಕ್ಕೆ ಕೊಡುಗೆ ನೀಡುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು ಮೈಸೂರು ನಡುವೆ ನಿರ್ಮಿಸಿರುವ 118 ಕಿಲೋ ಮೀಟರ್‌ ಉದ್ದದ ಎಕ್ಸ್‌ಪ್ರೆಸ್‌ವೇಯು ಇದೇ ಮಾರ್ಚ್‌ 12ರಂದು ಉದ್ಘಾಟನೆಗೆ ಸಜ್ಜಾಗಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ ಕುರಿತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಟ್ವೀಟ್ ಮಾಡಿದ್ದು, ಟ್ವೀಟ್'ನ್ನು ಪ್ರಧಾನಿ ಮೋದಿಯವರಿಗೆ ಟ್ಯಾಗ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮೋದಿಯವರು, ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ ಮಹತ್ವದ ಯೋಜನೆಯಾಗಿದ್ದು, ಕರ್ನಾಟಕದ ಬೆಳವಣಿಗೆಯ ಪಥಕ್ಕೆ ಕೊಡುಗೆ ನೀಡುತ್ತದೆ ಎಂದು ಹೇಳಿದ್ದಾರೆ.

ಶ್ರೀರಂಗಪಟ್ಟಣ, ಕೂರ್ಗ್, ಊಟಿ ಮತ್ತು ಕೇರಳದಂತಹ ಪ್ರದೇಶಗಳಿಗೆ ಪ್ರವೇಶವನ್ನು ಸುಧಾರಿಸಲು ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಯೋಜನೆಯ ನಿರ್ಮಾಣದ ಕುರಿತು ಗಡ್ಕರಿ ವಿವರಗಳನ್ನು ನೀಡಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಟ್ವೀಟ್ ಥ್ರೆಡ್‌ಗೆ ಪ್ರಧಾನಿ ಪ್ರತಿಕ್ರಿಯಿಸಿದರು.

ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ ಕುರಿತು ಟ್ವೀಟ್ ಮಾಡಿದ್ದ ಗಡ್ಕರಿಯವರು, ಯೋಜನೆಯ ವಿವರಗಳನ್ನು ನೀಡಿದ್ದರು. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ನಿರ್ಮಾಣವು ರಾಷ್ಟ್ರೀಯ ಹೆದ್ದಾರಿ-275 ರ ಭಾಗವನ್ನು ಸುತ್ತುವರೆದಿದೆ. ನಾಲ್ಕು ರೈಲು ಮೇಲ್ಸೇತುವೆಗಳು, ಒಂಬತ್ತು ಪ್ರಮುಖ ಸೇತುವೆಗಳು, 40 ಸಣ್ಣ ಸೇತುವೆಗಳು ಮತ್ತು 89 ಅಂಡರ್‌ಪಾಸ್‌ಗಳು ಮತ್ತು ಮೇಲ್ಸೇತುವೆಗಳನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ.

"ಈ ಮಹತ್ವಾಕಾಂಕ್ಷೆಯ ಯೋಜನೆಯು ಶ್ರೀರಂಗಪಟ್ಟಣ, ಕೂರ್ಗ್, ಊಟಿ ಮತ್ತು ಕೇರಳದಂತಹ ಪ್ರದೇಶಗಳಿಗೆ ಸಂಪರ್ಕವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ, ಇದರಿಂದ ಪ್ರವಾಸೋದ್ಯಮ ಸಾಮರ್ಥ್ಯವೂ ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ.

SCROLL FOR NEXT