ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆ ಹೆಚ್ಚಳ; ಪ್ರತಿದಿನ ಸರಾಸರಿ ಎಂಟು ರೈತರು ಸಾವಿಗೆ ಶರಣು!

ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಆರ್ಥಿಕ ಸಂಕಷ್ಟ ಮತ್ತು ಬೆಲೆ ಕುಸಿತ ಸೇರಿದಂತೆ ಹಲವಾರು ಕಾರಣಗಳಿಂದ ಪ್ರತಿದಿನ ಸರಾಸರಿ ಎಂಟು ರೈತರು ಸಾವಿಗೆ ಶರಣಾಗುತ್ತಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಆರ್ಥಿಕ ಸಂಕಷ್ಟ ಮತ್ತು ಬೆಲೆ ಕುಸಿತ ಸೇರಿದಂತೆ ಹಲವಾರು ಕಾರಣಗಳಿಂದ ಪ್ರತಿದಿನ ಸರಾಸರಿ ಎಂಟು ರೈತರು ಸಾವಿಗೆ ಶರಣಾಗುತ್ತಿದ್ದಾರೆ.

ರಾಜ್ಯ ಸರ್ಕಾರದ ಅಂಕಿಅಂಶಗಳ ಪ್ರಕಾರ, ಏಕನಾಥ್ ಶಿಂಧೆ ಆಡಳಿತದಲ್ಲಿ ಕಳೆದ ಏಳು ತಿಂಗಳಲ್ಲಿ 1,203 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಆಡಳಿತದಲ್ಲಿ ಎರಡೂವರೆ ವರ್ಷಗಳ ಅವಧಿಯಲ್ಲಿ 1,660 ರೈತರು ಸಾವನ್ನಪ್ಪಿದ್ದಾರೆ. 

2014 ಮತ್ತು 2019 ರ ಅವಧಿಯಲ್ಲಿ ದೇವೇಂದ್ರ ಫಡ್ವೈಸ್ ನೇತೃತ್ವದ ಬಿಜೆಪಿ ಆಡಳಿತದಲ್ಲಿ 5,061 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಂಕಿಅಂಶಗಳು ತಿಳಿಸಿವೆ.

ಈ ಅಂಕಿಅಂಶಗಳನ್ನು ಉಲ್ಲೇಖಿಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎನ್‌ಸಿಪಿ ಹಿರಿಯ ನಾಯಕ ಮತ್ತು ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರು, ಶಿಂಧೆ-ಫಡ್ನವಿಸ್ ಆಡಳಿತದಲ್ಲಿ ರೈತರ ಆತ್ಮಹತ್ಯೆಗಳು ಹೆಚ್ಚುತ್ತಿವೆ. ರಾಜ್ಯ ಸರ್ಕಾರ ರೈತರ ಸಮಸ್ಯೆಗಳ ಬಗ್ಗೆ ಸಂವೇದನಾಶೀಲವಾಗಿಲ್ಲ ಎಂದು ಆರೋಪಿಸಿದ್ದಾರೆ.

"ನಾವು ಯಾವುದೇ ವ್ಯಕ್ತಿ ಅಥವಾ ಯಾವುದೇ ನಿರ್ದಿಷ್ಟ ಮುಖ್ಯಮಂತ್ರಿಯನ್ನು ದೂಷಿಸಲು ಬಯಸುವುದಿಲ್ಲ. ಆದರೆ ಶಿಂಧೆ ಸರ್ಕಾರದಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಾವಿಗೆ ಶರಣಾಗುತ್ತಿರುವುದು ಕಟುವಾದ ವಾಸ್ತವ. ರೈತರಲ್ಲಿ ಆರ್ಥಿಕ ಸಂಕಷ್ಟವು ರೈತರ ಆತ್ಮಹತ್ಯೆಯ ಹಿಂದಿನ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಹತ್ತಿ, ಈರುಳ್ಳಿ, ಸೋಯಾಬಿನ್ ಬೆಳೆಯುವ ರೈತರ ಬೆಳೆಗೆ ಈ ವರ್ಷ ಸೂಕ್ತ ಬೆಲೆ ಸಿಗದೆ ರೈತರು ಈರುಳ್ಳಿಯನ್ನು ರಸ್ತೆಗೆ ಎಸೆದಿದ್ದನ್ನು ನಾವು ನೋಡಿದ್ದೇವೆ" ಎಂದು ಪವಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT