ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಕಚೇರಿಯಲ್ಲಿ ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ 
ದೇಶ

9 ಗಂಟೆ ವಿಚಾರಣೆ ಬಳಿಕ ಇಡಿ ಕಚೇರಿಯಿಂದ ತೆರಳಿದ ಕವಿತಾ, ಮತ್ತೆ ಮಾ.16ಕ್ಕೆ ಹಾಜರಾಗುವಂತೆ ಸಮನ್ಸ್

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ಜಾರಿ ನಿರ್ದೇಶನಾಲಯ(ಇಡಿ)ದ ಮುಂದೆ ವಿಚಾರಣೆಗೆ ಹಾಜರಾಗಿದ್ದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್‌ ಅವರ ಪುತ್ರಿ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರು ಸತತ 9...

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ಜಾರಿ ನಿರ್ದೇಶನಾಲಯ(ಇಡಿ)ದ ಮುಂದೆ ವಿಚಾರಣೆಗೆ ಹಾಜರಾಗಿದ್ದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್‌ ಅವರ ಪುತ್ರಿ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರು ಸತತ 9 ಗಂಟೆಗಳ ವಿಚಾರಣೆ ನಂತರ ಇಡಿ ಕಚೇರಿಯಿಂದ ತೆರಳಿದ್ದಾರೆ.

44 ವರ್ಷದ ಕೆ ಕವಿತಾ ಅವರನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಒಂಬತ್ತು ಗಂಟೆಗಳ ವಿಚಾರಣೆ ಮತ್ತು ಹೇಳಿಕೆ ದಾಖಲಿಸಿದ ನಂತರ ರಾತ್ರಿ 8 ಗಂಟೆ ಸುಮಾರಿಗೆ ಇಡಿ ಪ್ರಧಾನ ಕಚೇರಿಯಿಂದ ತೆರಳಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ನಾಯಕಿಗೆ ಮಾರ್ಚ್ 16 ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕವಿತಾ ಅವರು ಇಂದು ಬೆಳಗ್ಗೆ 11.15ರ ಸುಮಾರಿಗೆ ನಿರ್ದೇಶನಾಲಯದ ಪ್ರಧಾನ ಕಛೇರಿ ಆಗಮಿಸಿದ್ದರು. ಎಎಪಿ ಸರ್ಕಾರಕ್ಕೆ 100 ಕೋಟಿ ರೂಪಾಯಿ ಲಂಚ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ, ಇಡಿ ವಶದಲ್ಲಿರುವ ಸೌತ್ ಗ್ರೂಪ್ ನ ಅರುಣ್ ರಾಮಚಂದ್ರ ಪಿಳ್ಳೆ ಅವರ ಸಮ್ಮುಖದಲ್ಲೇ ಕವಿತಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

'ಸೌತ್ ಗ್ರೂಪ್' ಎಂಬುದು ಕವಿತಾ, ಅರಬಿಂದೋ ಫಾರ್ಮಾ ಪ್ರವರ್ತಕ ಶರತ್ ರೆಡ್ಡಿ, ವೈಎಸ್ಆರ್ ಕಾಂಗ್ರೆಸ್ ಸಂಸದ ಮಾಗುಂಟ ಶ್ರೀನಿವಾಸುಲು ರೆಡ್ಡಿ ಮತ್ತು ಇತರರೊಂದಿಗೆ ಸಂಪರ್ಕ ಹೊಂದಿದ ಮದ್ಯದ ಕಾರ್ಟೆಲ್ ಆಗಿದೆ. ಪಿಳ್ಳೈ ಅವರು ಕವಿತಾ ಅವರ ಬೇನಾಮಿ ಹೂಡಿಕೆಗಳನ್ನು ಪ್ರತಿನಿಧಿಸುತ್ತಿದ್ದಾರೆ ಎಂದು ಇಡಿ ಆರೋಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT