ತೇಜಸ್ವಿ ಯಾದವ್ 
ದೇಶ

ಉದ್ಯೋಗಕ್ಕಾಗಿ ಭೂ ಹಗರಣ: ಸಿಬಿಐ ವಿಚಾರಣೆಗೆ ತೇಜಸ್ವಿ ಯಾದವ್ ಗೈರು, ಹೊಸ ದಿನಾಂಕ ಕೇಳಿದ ಬಿಹಾರ ಡಿಸಿಎಂ

ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ಸಿಬಿಐ ವಿಚಾರಣೆಗೆ ಗೈರು ಹಾಜರಾಗಿರುವ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ವಿಚಾರಣೆಗೆ ಹೊಸ ದಿನಾಂಕ ನೀಡುವಂತೆ...

ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ಸಿಬಿಐ ವಿಚಾರಣೆಗೆ ಗೈರು ಹಾಜರಾಗಿರುವ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ವಿಚಾರಣೆಗೆ ಹೊಸ ದಿನಾಂಕ ನೀಡುವಂತೆ ಕೋರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ಮಾರ್ಚ್ 4 ರಂದು ಯಾದವ್ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಆದರೆ ಅಂದು ಅವರು ಸಿಬಿಐ ಅಧಿಕಾರಿಗಳ ಮುಂದೆ ಹಾಜರಾಗಿರಲಿಲ್ಲ. ಇಂದು ಮತ್ತೆ ವಿಚಾರಣೆಗೆ ಕರೆಯಲಾಗಿತ್ತು. ಆದರೆ ಇಂದು ಸಹ ಗೈರು ಆಗಿದ್ದಾರೆ.

ತೇಜಸ್ವಿ ಯಾದವ್ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಮತ್ತೆ ಹೊಸ ದಿನಾಂಕವನ್ನು ಕೋರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಇತ್ತೀಚೆಗೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ಅವರ ಪತ್ನಿ ರಾಬ್ರಿ ದೇವಿ ಅವರನ್ನು ದೆಹಲಿ ಮತ್ತು ಪಾಟ್ನಾದಲ್ಲಿ ವಿಚಾರಣೆಗೆ ಒಳಪಡಿಸಿತ್ತು. 

ಲಾಲು ಪ್ರಸಾದ್ ಯಾದವ್ ಅವರು 2004 ಮತ್ತು 2009 ರ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದಾಗ ತಮ್ಮ ಕುಟುಂಬಕ್ಕೆ ಜಮೀನನ್ನು ಉಡುಗೊರೆಯಾಗಿ ನೀಡಿದವರು ಅಥವಾ ಅಗ್ಗದ ದರದಲ್ಲಿ ಮಾರಾಟ ಮಾಡಿದ್ದ ಕುಟುಂಬಗಳಿಗೆ ರೈಲ್ವೆಯಲ್ಲಿ ಉದ್ಯೋಗ ನೀಡಿದ್ದರು ಎಂಬ ಆರೋಪವಿದೆ.

ಲಾಲು ಪ್ರಸಾದ್, ಅವರ ಪತ್ನಿ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಇತರ 14 ಜನರ ವಿರುದ್ಧ ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದ್ದು, ಮಾರ್ಚ್ 15 ರಂದು ವಿಚಾರಣೆಗೆ ಬರುವಂತೆ ಎಲ್ಲಾ ಆರೋಪಿಗಳಿಗೆ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್