ದೇಶ

ವ್ಯಕ್ತಿ ಮೇಲೆ ಹಲ್ಲೆ ಪ್ರಕರಣ: ತಮಿಳುನಾಡು ಮಾಜಿ ಸಿಎಂ ಪಳನಿಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲು

Lingaraj Badiger

ಮಧುರೈ: ಮಧುರೈ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರಿಗೆ ಥಳಿಸಿದ ಘಟನೆಗೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಹಂಗಾಮಿ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ(ಇಪಿಎಸ್) ಅವರ ವಿರುದ್ಧ ದಾಖಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. 

ಪಳನಿಸ್ವಾಮಿ ಅವರು ಮಾರ್ಚ್ 11 ರಂದು ಚೆನ್ನೈನಿಂದ ಮಧುರೈಗೆ ಆಗಮಿಸಿ ನಿರ್ಗಮನ ಪ್ರದೇಶವನ್ನು ತಲುಪಲು ವಿಮಾನ ನಿಲ್ದಾಣದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ವಾಹನದಲ್ಲಿದ್ದ ವ್ಯಕ್ತಿಯೊಬ್ಬರು ಮಾಜಿ ಮುಖ್ಯಮಂತ್ರಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ ಮತ್ತು ಅದನ್ನು ಫೇಸ್ ಬುಕ್ ನಲ್ಲಿ ಲೈವ್ ಮಾಡಿದ್ದಾನೆ. ವೇಳೆ ಈ ಪಳನಿಸ್ವಾಮಿ ಅಂಗರಕ್ಷಕರು ಮತ್ತು ಅವರ ಬೆಂಬಲಿಗರು ಆ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ರಾಜೇಶ್ವರನ್ ಎಂಬ ವ್ಯಕ್ತಿ, ‘ಚಿನ್ನಮ್ಮ’(ವಿಕೆ ಶಶಿಕಲಾ)ನಿಗೆ ದ್ರೋಹ ಬಗೆದಿರುವುದಾಗಿ ಪಳನಿಸ್ವಾಮಿ ವಿರುದ್ಧ ಘೋಷಣೆ ಕೂಗಿದ್ದಾರೆ.

ಈ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಪಳನಿಸ್ವಾಮಿ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದ ವ್ಯಕ್ತಿಯ ಸೆಲ್ ಫೋನ್ ಕಿತ್ತುಕೊಂಡು ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ವಿಮಾನ ನಿಲ್ದಾಣದಿಂದ ಫೇಸ್‌ಬುಕ್ ಲೈವ್ ಮಾಡಿದ ಆರೋಪದ ಮೇಲೆ ಪ್ರಯಾಣಿಕನನ್ನು ಸಹ ವಶಕ್ಕೆ ತೆಗೆದುಕೊಳ್ಳಲಾಗಿದೆ.

SCROLL FOR NEXT