ಸಾಂದರ್ಭಿಕ ಚಿತ್ರ 
ದೇಶ

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವುದಕ್ಕೆ ಕೇಂದ್ರದ ವಿರೋಧ ಖಂಡಿಸಿದ ಎಲ್​ಜಿಬಿಟಿಕ್ಯೂ

ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡುವುದಕ್ಕೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿರುವುದನ್ನು ಎಲ್​ಜಿಬಿಟಿಕ್ಯೂ ಸಮುದಾಯದ ಕಾರ್ಯಕರ್ತರು ಮತ್ತು ಸದಸ್ಯರು ಖಂಡಿಸಿದ್ದಾರೆ.

ನವದೆಹಲಿ: ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡುವುದಕ್ಕೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿರುವುದನ್ನು ಎಲ್​ಜಿಬಿಟಿಕ್ಯೂ ಸಮುದಾಯದ ಕಾರ್ಯಕರ್ತರು ಮತ್ತು ಸದಸ್ಯರು ಖಂಡಿಸಿದ್ದಾರೆ.

ಭಾರತದ ಬಹುತ್ವ ಮತ್ತು ವೈವಿಧ್ಯತೆಯ ಹೊರತಾಗಿಯೂ ಕೇಂದ್ರ ಸರ್ಕಾರ ಇನ್ನೂ ಭಿನ್ನಲಿಂಗೀಯರಿಗೆ ಮಾತ್ರ ವಿವಾಹದ ಹಕ್ಕುಗಳನ್ನು ನೀಡಬಹುದೆಂದು ನಂಬುತ್ತಿದೆ ಎಂದು ಎಲ್​ಜಿಬಿಟಿಕ್ಯೂ ಟೀಕಿಸಿದೆ.

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವ ಕುರಿತು ಸೋಮವಾರ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದ್ದು, ಈ ಸಂಬಂಧ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಸಲಿಂಗ ವಿವಾಹದ ಕಾನೂನು ಮಾನ್ಯತೆ ವೈಯಕ್ತಿಕ ಕಾನೂನುಗಳು ಮತ್ತು ಅಂಗೀಕೃತ ಸಾಮಾಜಿಕ ಮೌಲ್ಯಗಳಿಗೆ ಸಂಪೂರ್ಣ ಹಾನಿಯನ್ನುಂಟುಮಾಡುತ್ತದೆ ಎಂದು ಹೇಳಿದೆ.

ಸುಪ್ರೀಂ ಕೋರ್ಟ್‌ನಲ್ಲಿ ತನ್ನ ಪ್ರತಿ-ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸೆಕ್ಷನ್ 377 ಐಪಿಸಿಯ ಅಪರಾಧೀಕರಣವು ಸಲಿಂಗ ವಿವಾಹಕ್ಕೆ ಮಾನ್ಯತೆ ಸಾಧ್ಯವಿಲ್ಲ ಎಂದು ಹೇಳಿದೆ. ಭಿನ್ನಲಿಂಗೀಯ ಸ್ವಭಾವಕ್ಕೆ ಸೀಮಿತವಾದ ವಿವಾಹದ ಶಾಸನಬದ್ಧ ಮಾನ್ಯತೆ ಇತಿಹಾಸದುದ್ದಕ್ಕೂ ರೂಢಿಯಾಗಿದೆ. ಇದು ಅಸ್ತಿತ್ವ ಮತ್ತು ಮುಂದುವರಿಕೆ ಎರಡಕ್ಕೂ ಅಡಿಪಾಯವಾಗಿದೆ ಎಂದು ಕೇಂದ್ರ ಹೇಳಿದೆ.

ಕೇಂದ್ರದ ಅಫಿಡವಿಟ್‌ಗೆ ಪ್ರತಿಕ್ರಿಯಿಸಿದ ಸಲಿಂಗಿ ಹಕ್ಕುಗಳ ಕಾರ್ಯಕರ್ತ ಮತ್ತು ಎಲ್​ಜಿಬಿಟಿಕ್ಯೂ ಸಮುದಾಯದ ಸದಸ್ಯ ಹರೀಶ್ ಅಯ್ಯರ್ ಅವರು ಭಾರತ ಬಹುತ್ವದ ರಾಷ್ಟ್ರವಾಗಿದೆ ಎಂದಿದ್ದಾರೆ.

“ವಿವಿಧತೆಯಲ್ಲಿ ಏಕತೆ ಎಂಬುದು ನಮ್ಮ ಶಾಲೆಗಳಲ್ಲಿ ನಾವು ಕಲಿಯುವ ಪಾಠವಾಗಿದೆ. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಆದರೂ ನಾವು ಬಹುಸಂಖ್ಯಾತರಿಗೆ ಮಾತ್ರ ವಿವಾಹದ ಹಕ್ಕುಗಳನ್ನು ನೀಡುತ್ತೇವೆ ಮತ್ತು ಅಲ್ಪಸಂಖ್ಯಾತರಾದ ನಮಗೆ ನೀಡುತ್ತಿಲ್ಲ. ಅಯ್ಯರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT