ದೇಶ

ದೇಶದಲ್ಲಿ ಮತ್ತೆ ಕೋವಿಡ್ ಅಲ್ಪ ಪ್ರಮಾಣದ ಹೆಚ್ಚಳ; 24 ಗಂಟೆಗಳಲ್ಲಿ 524 ಹೊಸ ಸೋಂಕು ಪ್ರಕರಣ ಪತ್ತೆ!

Srinivasamurthy VN

ನವದೆಹಲಿ: ದೇಶದಲ್ಲಿ ಮತ್ತೆ ಕೋವಿಡ್ ಅಲ್ಪ ಪ್ರಮಾಣದ ಹೆಚ್ಚಳವಾಗಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ 524 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ.

ದೇಶದಲ್ಲಿ 113 ದಿನಗಳ ಬಳಿಕ ಒಂದೇ ದಿನ ಕೋವಿಡ್–19 ದೃಢಪಟ್ಟ 524 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಹೇಳಿದೆ. ಮೂರು ತಿಂಗಳ ಬಳಿಕ ಒಂದೇ ದಿನ 500ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 524 ಹೊಸ ಪ್ರಕರಣಗಳು ವರದಿಯಾಗಿದ್ದು ದೇಶದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಳವಾಗುತ್ತಿವೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. 

ಸಕ್ರಿಯ ಪ್ರಕರಣಗಳ ಸಂಖ್ಯೆ 3,618ಕ್ಕೆ ಏರಿಕೆಯಾಗಿದ್ದು, ಕೇರಳದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಇನ್ನು ದೇಶದಲ್ಲಿ ಇದುವರೆಗೆ ಪತ್ತೆಯಾಗಿರುವ ಪ್ರಕರಣಗಳ ಸಂಖ್ಯೆ 4,46,90,492ಕ್ಕೆ ತಲುಪಿದೆ. ಇಲ್ಲಿಯವರೆಗೂ ಕೋವಿಡ್‌ನಿಂದ ಮೃತಪಟ್ಟಿರುವವರ ಸಂಖ್ಯೆ 5,30,781ಕ್ಕೆ ಏರಿಕೆಯಾಗಿದೆ.

ಒಟ್ಟಾರೆ ಪ್ರಕರಣಗಳಿಗೆ ಹೋಲಿಸಿದರೆ, ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.01 ರಷ್ಟಿದೆ. ಗುಣಮುಖರಾದವರ ಪ್ರಮಾಣ ಶೇ 98.80 ರಷ್ಟು ಇದೆ ಎಂದು ಸಚಿವಾಲಯ ಹೇಳಿದೆ. ಇಲಾಖೆಯ ಮಾಹಿತಿ ಪ್ರಕಾರ ಇದುವರೆಗೆ 220.64 ಕೋಟಿ ಡೋಸ್‌ ಕೋವಿಡ್ ಲಸಿಕೆ ವಿತರಿಸಲಾಗಿದೆ.
 

SCROLL FOR NEXT