ದೇಶ

ಉತ್ತರ ಪ್ರದೇಶ: ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಪತ್ನಿ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಪೊಲೀಸರು

Nagaraja AB

ಲಖನೌ: ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಗ್ಯಾಂಗ್ ಸ್ಟರ್ ಕಮ್  ರಾಜಕಾರಣಿ ಅತೀಕ್ ಅಹ್ಮದ್ ಅವರ ಪತ್ನಿ ಶೈಸ್ತಾ ಪರ್ವೀನ್ ಅವರ ಬಗ್ಗೆ  ಮಾಹಿತಿ ನೀಡುವವರಿಗೆ ಉತ್ತರ ಪ್ರದೇಶ ಪೊಲೀಸರು 25,000 ರೂಪಾಯಿ ಬಹುಮಾನ ಘೋಷಿಸಿದ್ದಾರೆ.

ಸದ್ಯ ತಲೆಮರೆಸಿಕೊಂಡಿರುವ ಶೈಸ್ತಾ ಪರ್ವೀನ್‌ ಬಗ್ಗೆ ಸುಳಿವು ನೀಡಿದವರಿಗೆ  ಶುಕ್ರವಾರ 25,000 ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದು ಧುಮಂಗಂಜ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ರಾಜೇಶ್ ಕುಮಾರ್ ಮೌರ್ಯ ತಿಳಿಸಿದ್ದಾರೆ. ಫೆಬ್ರವರಿ 24 ರಂದು ಉಮೇಶ್ ಪಾಲ್ ಮತ್ತು ಅವರ ಇಬ್ಬರು ಭದ್ರತಾ ಸಿಬ್ಬಂದಿಯನ್ನು ಗುಂಡಿಕ್ಕಿ ಕೊಂದ ನಂತರ ಅವರ ಪತ್ನಿಯ ದೂರಿನ ಆಧಾರದ ಮೇಲೆ ಧುಮನ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಪ್ರಸ್ತುತ ಗುಜರಾತ್ ಜೈಲಿನಲ್ಲಿರುವ ಅಹ್ಮದ್, 2005ರಲ್ಲಿ ಬಹುಜನ ಸಮಾಜ ಪಕ್ಷದ ಶಾಸಕ ರಾಜು ಪಾಲ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ರಾಜು ಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅತೀಕ್, ಆತನ ಸಹೋದರ ಅಶ್ರಫ್ ಮತ್ತು ಪತ್ನಿ ಶೈಸ್ತಾ ಪರ್ವೀನ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿಂದೆ ಹತ್ಯೆಯಲ್ಲಿ ಭಾಗಿಯಾಗಿರುವ ಅಹ್ಮದ್ ಪುತ್ರ ಅಸದ್ ಸೇರಿದಂತೆ ಐವರು ಶೂಟರ್‌ಗಳ ಪತ್ತೆಗೆ 2,50,000 ರೂಪಾಯಿ ಬಹುಮಾನ ಘೋಷಿಸಲಾಗಿತ್ತು.

SCROLL FOR NEXT