ರಾಜ್ಯಸಭೆ(ಸಂಗ್ರಹ ಚಿತ್ರ) 
ದೇಶ

ಲಂಡನ್‌ನಲ್ಲಿ ರಾಹುಲ್ ಗಾಂಧಿ ಹೇಳಿಕೆ ಗದ್ದಲ; ರಾಜ್ಯಸಭೆ ಕಲಾಪ ಮುಂದೂಡಿಕೆ

ಇತ್ತೀಚೆಗಷ್ಟೇ ಲಂಡನ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಭಾರತದ ಪ್ರಜಾಪ್ರಭುತ್ವದ ಮೂಲ ರಚನೆಗೆ ಗಂಭೀರ ಸ್ವರೂಪದ ಅಪಾಯ ಬಂದೆರಗಿದೆ' ಎಂಬ ಹೇಳಿಕೆ ಬಗ್ಗೆ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷದ ಸಂಸದರು ಗದ್ದಲ ಎಬ್ಬಿಸಿದ ನಂತರ ರಾಜ್ಯಸಭೆಯ ಕಲಾಪವನ್ನು ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ನವದೆಹಲಿ: ಇತ್ತೀಚೆಗಷ್ಟೇ ಲಂಡನ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಭಾರತದ ಪ್ರಜಾಪ್ರಭುತ್ವದ ಮೂಲ ರಚನೆಗೆ ಗಂಭೀರ ಸ್ವರೂಪದ ಅಪಾಯ ಬಂದೆರಗಿದೆ' ಎಂಬ ಹೇಳಿಕೆ ಬಗ್ಗೆ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷದ ಸಂಸದರು ಗದ್ದಲ ಎಬ್ಬಿಸಿದ ನಂತರ ರಾಜ್ಯಸಭೆಯ ಕಲಾಪವನ್ನು ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಸದನದ ನಾಯಕ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಲಂಡನ್‌ನಲ್ಲಿ ನೀಡಿದ ಹೇಳಿಕೆಗಳಿಗಾಗಿ ಸದನಕ್ಕೆ ಬಂದು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಇಂದಿರಾ ಗಾಂಧಿಯವರ ಹೆಸರನ್ನು ತೆಗೆದುಕೊಳ್ಳದೆ ಗೋಯಲ್ ಅವರು, 'ತುರ್ತು ಪರಿಸ್ಥಿತಿ ವೇಳೆ ಮತ್ತು ಕಾಂಗ್ರೆಸ್ ನಾಯಕರು ಶಾಸನದ ಪ್ರತಿಯನ್ನು ಹರಿದು ಹಾಕಿದಾಗ ಭಾರತೀಯ ಪ್ರಜಾಪ್ರಭುತ್ವ ಅಪಾಯದಲ್ಲಿತ್ತು' ಎಂದು ಹೇಳಿದರು.

ಅವರ ಹೇಳಿಕೆಗೆ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದು, 'ರಾಜ್ಯಸಭಾ ಸದಸ್ಯರಲ್ಲದ ನಾಯಕರನ್ನು ಸದನಕ್ಕೆ ಕರೆಯಬೇಕೆಂಬ ಬೇಡಿಕೆ ಖಂಡನೀಯ' ಎಂದರು.

ಖರ್ಗೆ ಅವರು, ವಿದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ನೆನಪಿಸಿಕೊಂಡರು. ಆದರೆ, ಆಡಳಿತಾರೂಢ ಪಕ್ಷದ ಸದಸ್ಯರು ಅದಕ್ಕೆ ಅಡ್ಡಿಪಡಿಸಿದವು. ಈ ಹಂತದಲ್ಲಿ ಸಭಾಪತಿ ಜಗದೀಪ್ ಧನಕರ್ ಅವರು ಸದನದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಇಂಗ್ಲೆಂಡ್ ಭೇಟಿಯ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು, ಭಾರತೀಯ ಪ್ರಜಾಪ್ರಭುತ್ವದ ರಚನೆಗಳು ಕ್ರೂರ ದಾಳಿಗೆ ಒಳಗಾಗಿವೆ ಮತ್ತು ದೇಶದ ಸಂಸ್ಥೆಗಳ ಮೇಲೆ ಪೂರ್ಣ ಪ್ರಮಾಣದ ದಾಳಿ ನಡೆದಿದೆ. ಅಮೆರಿಕ ಮತ್ತು ಯುರೋಪ್‌ನಂತಹ ಪ್ರಜಾಸತ್ತಾತ್ಮಕ ರಾಷ್ಟ್ರಗಳು ಇದನ್ನು ಗಮನಿಸುವಲ್ಲಿ ವಿಫಲವಾಗಿವೆ' ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT