ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ತಂದೆಯನ್ನು ಕೊಂದು, ಸೂಟ್‌ಕೇಸ್‌ಗೆ ತುಂಬಲು ದೇಹವನ್ನು ಕತ್ತರಿಸಿದ ಆರೋಪಿ

ಭೀಕರ ಘಟನೆಯೊಂದರಲ್ಲಿ, ಗೋರಖ್‌ಪುರದಲ್ಲಿ ವ್ಯಕ್ತಿಯೊಬ್ಬ ಆಸ್ತಿ ವಿವಾದಕ್ಕಾಗಿ ತನ್ನ 62 ವರ್ಷದ ತಂದೆಯನ್ನು ಕೊಂದಿದ್ದಾನೆ. ಸೂಟ್‌ಕೇಸ್‌ಗೆ ತುಂಬಲು ಮತ್ತು ವಿಲೇವಾರಿ ಮಾಡಲು ದೇಹವನ್ನು ತುಂಡುಗಳಾಗಿ ಕತ್ತರಿಸಿದ್ದಾನೆ.

ಗೋರಖ್‌ಪುರ: ಭೀಕರ ಘಟನೆಯೊಂದರಲ್ಲಿ, ಗೋರಖ್‌ಪುರದಲ್ಲಿ ವ್ಯಕ್ತಿಯೊಬ್ಬ ಆಸ್ತಿ ವಿವಾದಕ್ಕಾಗಿ ತನ್ನ 62 ವರ್ಷದ ತಂದೆಯನ್ನು ಕೊಂದಿದ್ದಾನೆ.

30 ವರ್ಷದ ಆರೋಪಿ ಸಂತೋಷ್ ಕುಮಾರ್ ಗುಪ್ತಾ, ಸೂಟ್‌ಕೇಸ್‌ಗೆ ತುಂಬಲು ಮತ್ತು ವಿಲೇವಾರಿ ಮಾಡಲು ಸಂತ್ರಸ್ತ ಮುರಳಿಧರ್ ಗುಪ್ತಾ ಅವರ ದೇಹವನ್ನು ತುಂಡುಗಳಾಗಿ ಕತ್ತರಿಸಿದ್ದಾನೆ.

ತಿವಾರಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸೂರಜ್ ಕುಂಡ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯ ಸಹೋದರ ಪ್ರಶಾಂತ್ ಗುಪ್ತಾ ಪೊಲೀಸರಿಗೆ ದೂರು ನೀಡಿದ ನಂತರ ಭಾನುವಾರ ಪ್ರಕರಣ ದಾಖಲಿಸಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ.

ಸಂತೋಷ್ ಅಲಿಯಾಸ್ ಪ್ರಿನ್ಸ್ ವಿರುದ್ಧ ತನ್ನ ತಂದೆಯನ್ನು ಕೊಂದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್‌ಪಿ (ನಗರ) ಕೃಷ್ಣ ಕುಮಾರ್ ಬಿಷ್ಣೋಯ್ ತಿಳಿಸಿದ್ದಾರೆ.

ಸಂತ್ರಸ್ತನ ಪತ್ನಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ನಿಧನರಾಗಿದ್ದರು. ಮುರಳಿ ಅವರು ನೆಲ ಮಹಡಿಯಲ್ಲಿ ಜನರಲ್ ಸ್ಟೋರ್ ನಡೆಸುತ್ತಿದ್ದರು ಮತ್ತು ಮೊದಲ ಮಹಡಿಯಲ್ಲಿನ ಮನೆಯಲ್ಲಿ  ವಾಸವಾಗಿದ್ದರು. ಸಂತ್ರಸ್ತ ಮನೆಯಲ್ಲಿ ಒಬ್ಬರೇ ಇದ್ದಾಗ, ಆರೋಪಿ ಹಲ್ಲೆ ನಡೆಸಿದ್ದಾನೆ. 

ಮತ್ತೋರ್ವ ಪುತ್ರ ಪ್ರಶಾಂತ್ ಗುಪ್ತಾ ಮದುವೆಯೊಂದರಲ್ಲಿ ಪಾಲ್ಗೊಂಡು ತಡರಾತ್ರಿ ಮನೆಗೆ ಬಂದಿದ್ದು, ಮನೆಯಲ್ಲಿ ರಕ್ತದ ಕಲೆಗಳು ಕಂಡುಬಂದಿವೆ ಎಂದು ತಿಳಿಸಿದ್ದಾರೆ.

ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಎಸ್‌ಪಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT