ಸಾಂದರ್ಭಿಕ ಚಿತ್ರ 
ದೇಶ

ಅಸ್ಸಾಂ: ಸೋಶಿಯಲ್ ಮೀಡಿಯಾದಲ್ಲಿ ಗಿಳಿಗಳ ಮಾರಾಟಕ್ಕೆ ಮುಂದಾಗಿದ್ದ ಯೂಟ್ಯೂಬರ್ ಬಂಧನ

ಸೋಶಿಯಲ್ ಮೀಡಿಯಾ ಯೂಟ್ಯೂಬ್ ಚಾನೆಲ್‌ನಲ್ಲಿ ಗಿಳಿಗಳನ್ನು ಮಾರಾಟ ಮಾಡಲು ಮುಂದಾಗಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ  ಎಂದು ಅರಣ್ಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಕೊಕ್ರಜಾರ್ : ಸೋಶಿಯಲ್ ಮೀಡಿಯಾ ಯೂಟ್ಯೂಬ್ ಚಾನೆಲ್‌ನಲ್ಲಿ ಗಿಳಿಗಳನ್ನು ಮಾರಾಟ ಮಾಡಲು ಮುಂದಾಗಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ  ಎಂದು ಅರಣ್ಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಿದ ನಂತರ ಆತನ್ನು  ಅರಣ್ಯ ಇಲಾಖೆ ವಶಕ್ಕೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಾಣಿಗಳ ನೈತಿಕ ಚಿಕಿತ್ಸೆಗಾಗಿ ಜನರು (ಪೆಟಾ) ನೀಡಿದ ದೂರಿನ ಆಧಾರದ ಮೇಲೆ ಆರೋಪಿ ಜಹಿದುಲ್ ಇಸ್ಲಾಂನನ್ನು ಬಂಧಿಸಲಾಗಿದೆ ಎಂದು ಕಚುಗಾಂವ್‌ನ ವಿಭಾಗೀಯ ಅರಣ್ಯಾಧಿಕಾರಿ ಭಾನು ಸಿನ್ಹಾ ತಿಳಿಸಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಆರೋಪಿಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಜಹಿದುಲ್ ಇಸ್ಲಾಂನಿಂದ ಎರಡು ಗಿಳಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೇರೆ ಯಾವುದೇ ವ್ಯಕ್ತಿ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಯೇ ಎಂಬುದು ತನಿಖೆಯ ನಂತರ ತಿಳಿಯುತ್ತದೆ ಎಂದು ಸಿನ್ಹಾ ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!