ಸಾಂದರ್ಭಿಕ ಚಿತ್ರ 
ದೇಶ

ರಾಜಸ್ಥಾನ: ಹಾಸ್ಟೆಲ್ ನಲ್ಲಿ ಬಿಹಾರದ ನೀಟ್ ಆಕಾಂಕ್ಷಿ ನೇಣಿಗೆ ಶರಣು

ರಾಜಸ್ಥಾನದ ಕೋಟಾದಲ್ಲಿರುವ ಹಾಸ್ಟೆಲ್ ನ ಕೊಠಡಿಯಲ್ಲಿ ಬಿಹಾರದ 18 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ಮಂಗಳವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಟಾ(ರಾಜಸ್ಥಾನ): ರಾಜಸ್ಥಾನದ ಕೋಟಾದಲ್ಲಿರುವ ಹಾಸ್ಟೆಲ್ ನ ಕೊಠಡಿಯಲ್ಲಿ ಬಿಹಾರದ 18 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ಮಂಗಳವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವಿದ್ಯಾರ್ಥಿನಿಯನ್ನು ಶೆಂಬುಲ್ ಪರ್ವೀನ್ ಎಂದು ಗುರುತಿಸಲಾಗಿದ್ದು, ಹಾಸ್ಟೆಲ್ ಕೊಠಡಿಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಕಳೆದ ವರ್ಷ ಜೂನ್‌ನಲ್ಲಿ ಬಿಹಾರದ ಪಶ್ಚಿಮ ಚಂಪಾರಣ್‌ನಿಂದ ರಾಜಸ್ಥಾನದ ಕೋಟಾಕ್ಕೆ ಬಂದಿದ್ದ ಪರ್ವೀನ್, ನೀಟ್ ಪರೀಕ್ಷೆಗಾಗಿ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಸೇರಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿನಿಯ ಕೊಠಡಿಯಲ್ಲಿ ಯಾವುದೇ ಸೂಸೈಡ್ ನೋಟ್ ಪತ್ತೆಯಾಗದ ಕಾರಣ ಪೊಲೀಸರು ಈ ಆತ್ಮಹತ್ಯೆಯ ಹಿಂದಿನ ಕಾರಣವನ್ನು ಇನ್ನೂ ಖಚಿತಪಡಿಸಿಲ್ಲ. ಆದಾಗ್ಯೂ, ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಗಳಿಸಿದ್ದಕ್ಕಾಗಿ ವಿದ್ಯಾರ್ಥಿನಿ ತೀವ್ರ ಬೇಸರಗೊಂಡಿದ್ದಳು ಎಂದು ಆಕೆಯ ಪೋಷಕರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!