ದೇಶ

ಹಿರಿಯ ಪತ್ರಕರ್ತ ವೇದ್ ಪ್ರತಾಪ್ ವೈದಿಕ್ ನಿಧನ

ಹಿರಿಯ ಪತ್ರಕರ್ತ ವೇದ್ ಪ್ರತಾಪ್ ವೈದಿಕ್ ಅವರು ಮಂಗಳವಾರ ಗುರುಗ್ರಾಮದ ತಮ್ಮ ಮನೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.

ನವದೆಹಲಿ: ಹಿರಿಯ ಪತ್ರಕರ್ತ ವೇದ್ ಪ್ರತಾಪ್ ವೈದಿಕ್ ಅವರು ಮಂಗಳವಾರ ಗುರುಗ್ರಾಮದ ತಮ್ಮ ಮನೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.

"ಹಿರಿಯ ಪತ್ರಕರ್ತ ವೈದಿಕ್ ಅವರು ಇಂದು ಬೆಳಗ್ಗೆ ಅವರ ಗುರುಗ್ರಾಮದ ಮನೆಯಲ್ಲಿ ಬಾತ್ ರೂಮ್ ಗೆ ಹೋದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿರುವುದಾಗಿ" ಎಂದು ಅವರ ಖಾಸಗಿ ಸಹಾಯಕ ಮೋಹನ್ ಅವರು ಪಿಟಿಐಗೆ ತಿಳಿಸಿದ್ದಾರೆ.

ವೈದಿಕ್ ಸಾಮಾನ್ಯವಾಗಿ ಆರೋಗ್ಯವಾಗಿದ್ದರು ಮತ್ತು ಸೋಮವಾರ ದೆಹಲಿಗೆ ಹೋಗಿದ್ದರು ಎಂದು ಅವರು ಹೇಳಿದ್ದಾರೆ.

ಸಾವಿಗೆ ಹೃದಯಾಘಾತವೇ ಕಾರಣ ಎಂದು ವೈದ್ಯರು ಶಂಕಿಸಿರುವುದಾಗಿ ಮೋಹನ್ ತಿಳಿಸಿದ್ದಾರೆ.

ಹಿಂದಿ ಸುದ್ದಿ ಸಂಸ್ಥೆ 'ಭಾಷಾ' ದ ಸಂಸ್ಥಾಪಕ-ಸಂಪಾದಕರಾಗಿದ್ದ ವೈದಿಕ್ ಅವರು ಒಂದು ದಶಕಕ್ಕೂ ಹೆಚ್ಚು ಕಾಲ ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ(ಪಿಟಿಐ)ದಲ್ಲಿ ಕೆಲಸ ಮಾಡಿದ್ದಾರೆ.

ವೈದಿಕ್ ಅವರು ಟೈಮ್ಸ್ ಗ್ರೂಪ್‌ನ ನವಭಾರತ್ ಟೈಮ್ಸ್‌ನ ಸಂಪಾದಕ(ವೀಕ್ಷಣೆ)ರಾಗಿಯೂ ಸೇವೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran War: Hormuz ಕುರಿತು ಬಹ್ರೇನ್ ನೇತೃತ್ವದಲ್ಲಿ ಕರಡು ನಿರ್ಣಯ; ಇಂದು UNSC ಮತದಾನ!

ಸೋಲಿನಲ್ಲೂ RCB ದಾಖಲೆ ಮುರಿದ CSK: 210 ರನ್ ಬಾರಿಸಿ ಚೆನ್ನೈ ವಿರುದ್ಧ 5 ವಿಕೆಟ್ ಗಳಿಂದ ಗೆದ್ದ ಪಂಜಾಬ್‌!

ಹುಬ್ಬಳ್ಳಿ Love Jihad ಕೇಸ್‌ಗೆ ಟ್ವಿಸ್ಟ್: Gym ಟ್ರೈನರ್ Sameer Mulla ಮೊಬೈಲ್‌ನಲ್ಲಿ ಯುವತಿಯರ ಫೋಟೋಗಳು ಪತ್ತೆ!

'ನಿಮ್ದೊಂದೆರಡು ಕಿತ್ತೋದ ವಿಮಾನವಾಹಕ ನೌಕೆಗಳು ಇದ್ಯಲ್ಲಾ ಯುದ್ಧಕ್ಕೆ ಕಳಿಸ್ತೀರಾ?' ಅಂತ ಕೇಳಿದ್ದೆ, ಮ್ಯಾಕ್ರಾನ್ ಗೆ ಹೆಂಡ್ತಿ ಕಾಟ: ಬ್ರಿಟನ್, ಫ್ರಾನ್ಸ್ ಬಗ್ಗೆ ಟ್ರಂಪ್ ವ್ಯಂಗ್ಯ

Bengal polls: ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ರಾಜಕಾರಣಿಗಳಿಗೆ ಸೆಕ್ಯೂರಿಟಿ ವಾಪಸ್, ಚುನಾವಣಾ ಆಯೋಗ ನಿರ್ದೇಶನ!

SCROLL FOR NEXT