24 ಗಂಟೆಗಳ ರಕ್ಷಣಾ ಕಾರ್ಯಾಚರಣೆ ಬಳಿಕ ಬಾಲಕನನ್ನು ಮೇಲೆತ್ತಿದ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ 
ದೇಶ

ಮಧ್ಯ ಪ್ರದೇಶ: ರಕ್ಷಣಾ ಕಾರ್ಯಾಚರಣೆ ವಿಫಲ, ಬೋರ್‌ವೆಲ್‌ಗೆ ಬಿದ್ದಿದ್ದ 7 ವರ್ಷದ ಬಾಲಕ ಸಾವು

ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಬೋರ್‌ವೆಲ್‌ಗೆ ಬಿದ್ದಿದ್ದ 7 ವರ್ಷದ ಬಾಲಕನನ್ನು ಸುಮಾರು 24 ಗಂಟೆಗಳ ಕಾರ್ಯಾಚರಣೆಯ ನಂತರ ಮೇಲೆತ್ತಲಾಗಿದೆ. ಆದರೆ, ಆತ ಬದುಕಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ವಿದಿಶಾ: ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಬೋರ್‌ವೆಲ್‌ಗೆ ಬಿದ್ದಿದ್ದ 7 ವರ್ಷದ ಬಾಲಕನನ್ನು ಸುಮಾರು 24 ಗಂಟೆಗಳ ಕಾರ್ಯಾಚರಣೆಯ ನಂತರ ಮೇಲೆತ್ತಲಾಗಿದೆ. ಆದರೆ, ಆತ ಬದುಕಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಪರೀಕ್ಷೆಯ ನಂತರ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದರು ಎಂದು ವಿದಿಶಾ ಜಿಲ್ಲಾಧಿಕಾರಿ ಉಮಾ ಶಂಕರ್ ಭಾರ್ಗವ ಸುದ್ದಿಗಾರರಿಗೆ ತಿಳಿಸಿದರು.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಬಾಲಕನ ಕುಟುಂಬಕ್ಕೆ 4 ಲಕ್ಷ ರೂಪಾಯಿ ನೆರವು ಘೋಷಿಸಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಬೋರ್‌ವೆಲ್‌ಗೆ ಬಿದ್ದ ಸುಮಾರು 24 ಗಂಟೆಗಳ ನಂತರ ಮಗುವನ್ನು ಮೇಲೆತ್ತಲಾಗಿದೆ. ನಂತರ ಜಿಲ್ಲಾ ಕೇಂದ್ರದಿಂದ ಸುಮಾರು 14 ಕಿಮೀ ದೂರದಲ್ಲಿರುವ ಲ್ಯಾಟೇರಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಮಗುವನ್ನು ಸಾಗಿಸಲಾಯಿತು ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಹರ್ಷಲ್ ಚೌಧರಿ ತಿಳಿಸಿದ್ದಾರೆ.

ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಬಾಲಕ 60 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದು, 43 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದ. ಮಗುವನ್ನು ಹೊರತೆಗೆಯಲು ಜೆಸಿಬಿ ಯಂತ್ರಗಳ (ಅರ್ತ್‌ಮೂವರ್) ಸಹಾಯದಿಂದ ಸಮಾನಾಂತರ ಹೊಂಡವನ್ನು ಅಗೆಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಲೋಕೇಶ್ ಅಹಿರ್ವಾರ್ ಎಂಬ ಬಾಲಕ ಆಟವಾಡುತ್ತಿದ್ದಾಗ ಜಿಲ್ಲೆಯ ಲಟೇರಿ ತಹಸಿಲ್ ವ್ಯಾಪ್ತಿಯ ಖೇರ್ಖೇಡಿ ಪಥರ್ ಗ್ರಾಮದಲ್ಲಿ ಕಿರಿದಾದ ರಂಧ್ರಕ್ಕೆ ಜಾರಿ ಬಿದ್ದಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಗ್ರಾಮಸ್ಥರು ಮಾಹಿತಿ ನೀಡಿದ ನಂತರ, ರಕ್ಷಣಾ ತಂಡವು ಸ್ಥಳಕ್ಕೆ ಧಾವಿಸಿ ಮಗುವನ್ನು ಹೊರತೆಗೆಯಲು ಕಾರ್ಯಾಚರಣೆ ಪ್ರಾರಂಭಿಸಿತು ಎಂದು ಚೌಧರಿ ಹೇಳಿದರು.

ಆಕ್ಸಿಜನ್ ಪೈಪ್ ಅನ್ನು ಬೋರ್‌ವೆಲ್‌ಗೆ ಇಳಿಸಲಾಯಿತು ಮತ್ತು ರಕ್ಷಣಾ ತಂಡ ರಾತ್ರಿಯ ದೃಷ್ಟಿ ಸಾಧನದ (night-vision device) ಮೂಲಕ ಬಾಲಕನ ಮೇಲೆ ಕಣ್ಣಿಟ್ಟಿದ್ದರು ಎಂದು ವಿದಿಶಾ ಜಿಲ್ಲಾಧಿಕಾರಿ ಈ ಹಿಂದೆ ತಿಳಿಸಿದ್ದರು.

ಬಾಲಕನನ್ನು ರಕ್ಷಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಮಂಗಳವಾರ, ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯಲ್ಲಿ 9 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ 5 ವರ್ಷದ ಬಾಲಕನನ್ನು ಬೋರ್‌ವೆಲ್‌ನಿಂದ ಹೊರತೆಗೆದರೂ, ಆತ ಬದುಕಿ ಬಂದಿರಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026 : ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ವಿಂಡೀಸ್ ವಿರುದ್ಧದ ಪಂದ್ಯದಲ್ಲಿ 9ನೇ ಶತಕ ಸಿಡಿಸಿದ KL Rahul: 10,000 ಅಂತಾರಾಷ್ಟ್ರೀಯ ರನ್!

Asian Games 2026: ಪಾಕಿಸ್ತಾನ ಬಗ್ಗು ಬಡಿದ ಭಾರತಕ್ಕೆ ಮತ್ತೊಂದು ಚಿನ್ನ: ಗೋಲ್ಡ್ ಗೆದ್ದ ಕುಸ್ತಿಪಟು ಅಮನ್!

'ಅಶ್ಲೀಲ, ಅಸಭ್ಯ, ವಿಕೃತಿ': TVK ಮಹಿಳಾ ಅಭ್ಯರ್ಥಿ ಕುರಿತ ಸ್ಟಾಲಿನ್ ಹೇಳಿ ಖಂಡಿಸಿದ CM ವಿಜಯ್; ಚುನಾವಣಾ ಆಯೋಗಕ್ಕೆ ದೂರು

ನೋಯ್ಡಾದ 'ಸೂಪರ್ನೋವಾ' ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ! ಭಯಾನಕ Video