ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 'ಸುಪ್ರೀಂ' ಮೊರೆ ಹೋದ ಕೆ ಕವಿತಾ

Ramyashree GN

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಿಂದ ಉದ್ಭವಿಸಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಸಮನ್ಸ್ ಮತ್ತು ಬಂಧನದಿಂದ ರಕ್ಷಣೆ ಕೋರಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ  ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ ಕವಿತಾ ಅವರು ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಮತ್ತು ನ್ಯಾಯಮೂರ್ತಿ ಪಿಎಸ್ ನರಸಿಂಹ ಅವರನ್ನೊಳಗೊಂಡ ಪೀಠವು ಮಾರ್ಚ್ 24 ರಂದು ವಿಧಾನ ಪರಿಷತ್ ಸದಸ್ಯೆಯಾಗಿರುವ ಕವಿತಾ ಅವರ ಮನವಿಯನ್ನು ಆಲಿಸಲು ಒಪ್ಪಿಕೊಂಡಿತು.

'ಒಬ್ಬ ಮಹಿಳೆಯನ್ನು ಜಾರಿ ನಿರ್ದೇಶನಾಲಯದ ಕಚೇರಿಗೆ ಕರೆಸಬಹುದೇ?. ಇದು ಸಂಪೂರ್ಣವಾಗಿ ಕಾನೂನಿಗೆ ವಿರುದ್ಧವಾಗಿದೆ'. ಹೀಗಾಗಿ ಅರ್ಜಿಯ ತುರ್ತು ವಿಚಾರಣೆಯನ್ನು ಕೋರಿ ಆಕೆಯ ವಕೀಲರು ಮನವಿ ಸಲ್ಲಿಸಿದರು.

ಮಾರ್ಚ್ 11 ರಂದು, ಹಣ ಅಕ್ರಮ ವಗ್ರಾವಣೆ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿಯನ್ನು ಜಾರಿ ನಿರ್ದೇಶನಾಲಯವು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.

SCROLL FOR NEXT