ಸಾಂದರ್ಭಿಕ ಚಿತ್ರ 
ದೇಶ

ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಏರಿಕೆ: 117 ದಿನಗಳ ಬಳಿಕ 600ಕ್ಕೂ ಅಧಿಕ ಪ್ರಕರಣ, ಐವರು ಸಾವು

ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಆರಿಕೆಯಾಗುತ್ತಿದ್ದು, 117 ದಿನಗಳ ಬಳಿಕ ಇದೇ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ 600ಕ್ಕೂ ಅಧಿಕ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಆರಿಕೆಯಾಗುತ್ತಿದ್ದು, 117 ದಿನಗಳ ಬಳಿಕ ಇದೇ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ 600ಕ್ಕೂ ಅಧಿಕ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ಈ ಮೂಲಕ ಈವರೆಗೆ 4,46,91,956 ಮಂದಿಗೆ ಕೋವಿಡ್ ತಗುಲಿದೆ. ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,197ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಐವರು ಸಾವಿಗೀಡಾಗಿದ್ದು, ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 5,30,789ಕ್ಕೆ ಏರಿಕೆಯಾಗಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ ಇಬ್ಬರು ಸಾವಿಗೀಡಾಗಿದ್ದರೆ, ಮಹಾರಾಷ್ಟ್ರದಲ್ಲಿ ಎರಡು ಮತ್ತು ಉತ್ತರಾಖಂಡದಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ.

ಕಳೆದ ವರ್ಷ ನವೆಂಬರ್ 18 ರಂದು ದೇಶದಲ್ಲಿ 656 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದವು.

ರಾಷ್ಟ್ರೀಯ ಕೋವಿಡ್-19 ಚೇತರಿಕೆ ದರ 98.80ರಷ್ಟಿದ್ದು, ಈವರೆಗೆ 4,41,56,970 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ.

ಸಚಿವಾಲಯದ ವೆಬ್‌ಸೈಟ್‌ನಲ್ಲಿ ನೀಡಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ 220.64 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT