ಪ್ರತಿಮಾ ಭೌಮಿಕ್ 
ದೇಶ

ತ್ರಿಪುರಾ: ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ಶಾಸಕಿ ಸ್ಥಾನಕ್ಕೆ ರಾಜೀನಾಮೆ

ಇತ್ತೀಚೆಗಷ್ಟೇ ಮುಕ್ತಾಯಗೊಂಡ ವಿಧಾನಸಭೆ ಚುನಾವಣೆಯಲ್ಲಿ ಧನಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ಅವರು ಬುಧವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅಗರ್ತಲಾ: ಇತ್ತೀಚೆಗಷ್ಟೇ ಮುಕ್ತಾಯಗೊಂಡ ತ್ರಿಪುರಾ ವಿಧಾನಸಭೆ ಚುನಾವಣೆಯಲ್ಲಿ ಧನಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ಅವರು ಬುಧವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

"ನಾನು ಸಂಸದೆ ಮತ್ತು ಕೇಂದ್ರ ಸಚಿವೆಯಾಗಿದ್ದರೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ನನಗೆ ಅವಕಾಶ ನೀಡಿತ್ತು. ಆದರೆ ಸಂಸದ ಮತ್ತು ಶಾಸಕನಾಗಿ ಏಕಕಾಲದಲ್ಲಿ ಕೆಲಸ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ. ಹೀಗಾಗಿ ನಾನು ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ" ಎಂದು ಭೌಮಿಕ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವೆ ಭೌಮಿಕ್ ಅವರು, ಧನ್‌ಪುರದ ಜನರಿಗೆ ಬಿಜೆಪಿ-ಐಪಿಎಫ್‌ಟಿ ಸರ್ಕಾರ "ಚುನಾವಣೆಗೂ ಮುನ್ನ ನೀಡಿದ ಎಲ್ಲಾ ಭರವಸೆಗಳನ್ನುಈಡೇರಿಸಲಿದೆ" ಎಂದು ಭರವಸೆ ನೀಡಿದರು.

ಭೌಮಿಕ್ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ಹಂಗಾಮಿ ಸ್ಪೀಕರ್ ಬಿನೋಯ್ ಭೂಷಣ್ ದಾಸ್ ಅವರು ತಿಳಿಸಿದ್ದಾರೆ.

ಭೌಮಿಕ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಧನಪುರ ವಿಧಾನಸಭಾ ಕ್ಷೇತ್ರಕ್ಕೆ ಮುಂದಿನ ಆರು ತಿಂಗಳಲ್ಲಿ ಉಪಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್