ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಶೇ.70 ರಷ್ಟು ಮುಕ್ತಾಯ; 2024 ಜನವರಿಯಲ್ಲಿ ರಾಮ ಲಲ್ಲಾ ವಿಗ್ರಹ ಪ್ರತಿಷ್ಠಾಪನೆ

ಜನವರಿ 2024 ರ ಮೂರನೇ ವಾರದಲ್ಲಿ ಅಯೋಧ್ಯೆಯ ಮಂದಿರದಲ್ಲಿ ಭಗವಾನ್ ರಾಮ ಲಲ್ಲಾನ ವಿಗ್ರಹದ ಪ್ರತಿಷ್ಠಾಪನೆಯಾಗಲಿದೆ ಎಂದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಖಜಾಂಚಿ ಸ್ವಾಮಿ ಗೋವಿಂದ್ ದೆವ್ ಗಿರಿ ಮಹಾರಾಜ್ ಮಾಹಿತಿ ನೀಡಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾಮಗಾರಿ
Srinivas Rao BV
Updated On : 16 Mar 2023, 3:48 pm

ನವದೆಹಲಿ: ಜನವರಿ 2024 ರ ಮೂರನೇ ವಾರದಲ್ಲಿ ಅಯೋಧ್ಯೆಯ ಮಂದಿರದಲ್ಲಿ ಭಗವಾನ್ ರಾಮ ಲಲ್ಲಾನ ವಿಗ್ರಹದ ಪ್ರತಿಷ್ಠಾಪನೆಯಾಗಲಿದೆ ಎಂದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಖಜಾಂಚಿ ಸ್ವಾಮಿ ಗೋವಿಂದ್ ದೆವ್ ಗಿರಿ ಮಹಾರಾಜ್ ಮಾಹಿತಿ ನೀಡಿದ್ದಾರೆ. 

ಮಹಾರಾಷ್ಟ್ರದ ದೊಂಬಿವಿಲ್ ಗೆ ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಭಗವಾನ್ ರಾಮಚಂದ್ರನ ದೇವಾಲಯ ನಿರ್ಮಾಣ ಕಾಮಗಾರಿ ಕ್ಷಿಪ್ರಗತಿಯಲ್ಲಿ ನಡೆಯುತ್ತಿದೆ ಹಾಗೂ ಉತ್ತಮವಾಗಿ ನಡೆಯುತ್ತಿದೆ. ಈಗ ಶೇ.70 ರಷ್ಟು ಕಾಮಗಾರಿ ಮುಕ್ತಾಯಗೊಂಡಿದೆ. 2024 ರ ಜನವರಿ ಮೂರನೇ ವಾರದ ವೇಳೆಗೆ ಅಯೋಧ್ಯೆಯಲ್ಲಿ ರಾಮ ಲಲ್ಲಾ ವಿಗ್ರಹ ಮೂಲ ಸ್ಥಾನದಲ್ಲಿ ಪ್ರತಿಷ್ಠಾಪನೆಯಾಗಲಿದೆ ಅಂದಿನಿಂದಲೇ ಭಕ್ತಾದಿಗಳಿಗೆ ದರ್ಶನ ಹಾಗೂ ಪ್ರಾರ್ಥನೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ವರ್ಷಗಳ ಕಾಯುವಿಕೆ ಕೊನೆಗೂ ಅಂತ್ಯ: ಅಯೋಧ್ಯೆ ಮಸೀದಿ ನಿರ್ಮಾಣಕ್ಕೆ ಕೊನೆಗೂ ಸಿಕ್ತು ಅನುಮೋದನೆ
 
ನಮ್ಮ ಟಾರ್ಗೆಟ್ ಇರುವುದು ಮೊದಲ ಮಹಡಿಯಲ್ಲಿರಲಿರುವ ಗರ್ಭಗುಡಿಯ ಕಾಮಗಾರಿ ಪೂರ್ಣಗೊಳಿಸಿ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸುವುದಾಗಿದೆ. ಆ ಬಳಿಕ ದೇವಾಲಯದ ಕರಕುಶಲತೆಯ ಕಾಮಗಾರಿಗಳು ಮುಂದುವರಿಯುತ್ತದೆ, ”ಎಂದು ಅವರು ಹೇಳಿದರು.

Advertisement

Advertisement

ಅಯೋಧ್ಯೆಯ ರಾಮಜನ್ಮಭೂಮಿ ವಿಚಾರದಲ್ಲಿ 2019 ರ ನವೆಂಬರ್ 9 ರಂದು ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement