ಹಾಸ್ಯನಟ ಖಯಾಲಿ 
ದೇಶ

ಜೈಪುರ: ಹಾಸ್ಯನಟ ಖಯಾಲಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಜೈಪುರದ ಹೋಟೆಲ್ ಕೊಠಡಿಯಲ್ಲಿ 25 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಖ್ಯಾತ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಖಯಾಲಿ ಸಹರಾನ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ...

ಜೈಪುರ: ಜೈಪುರದ ಹೋಟೆಲ್ ಕೊಠಡಿಯಲ್ಲಿ 25 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಖ್ಯಾತ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಖಯಾಲಿ ಸಹರಾನ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಮಂಗಳವಾರ ಜೈಪುರದ ಮಾನಸ ಸರೋವರ ಪೊಲೀಸ್ ಠಾಣೆಯಲ್ಲಿ ಹಾಸ್ಯನಟನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ಸೋಮವಾರ ಈ ಘಟನೆ ನಡೆದಿದ್ದು, ಎಎಪಿ ಕಾರ್ಯಕರ್ತನಾಗಿರುವ ಹಾಸ್ಯನಟ, 'ಮದ್ಯದ ಅಮಲಿನಲ್ಲಿ' ಮಹಿಳೆಗೆ ಉದ್ಯೋಗ ಪಡೆಯಲು ಸಹಾಯ ಮಾಡುವ ನೆಪದಲ್ಲಿ ಮಾನಸ ಸರೋವರ ಪ್ರದೇಶದ ಹೋಟೆಲ್ ಕೊಠಡಿಯಲ್ಲಿ ಅತ್ಯಾಚಾರವೆಸಗಿದ್ದಾರೆ.

"ಮಹಿಳೆ ನೀಡಿದ ದೂರಿನ ಮೇರೆಗೆ ಹಾಸ್ಯನಟನ ವಿರುದ್ಧ ಐಪಿಸಿ ಸೆಕ್ಷನ್ 376(ಅತ್ಯಾಚಾರ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ" ಎಂದು ಮಾನಸ ಸರೋವರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಸಂದೀಪ್ ಯಾದವ್ ಅವರು ತಿಳಿಸಿದ್ದಾರೆ.

ಶ್ರೀಗಂಗಾನಗರ ಮೂಲದ ಮಹಿಳೆ ಸಂಸ್ಥೆಯೊಂದರಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತ ಮಹಿಳೆ, ಮತ್ತೊಬ್ಬ ಮಹಿಳೆಯೊಂದಿಗೆ ಸುಮಾರು ಒಂದು ತಿಂಗಳ ಹಿಂದೆ ಉದ್ಯೋಗಕ್ಕಾಗಿ ಸಹಾಯ ಕೋರಿ ಹಾಸ್ಯನಟನನ್ನು ಸಂಪರ್ಕಿಸಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್