ಪ್ರಾತಿನಿಧಿಕ ಚಿತ್ರ 
ದೇಶ

ಏರುಗತಿಯಲ್ಲಿ ಕೋವಿಡ್ : 24 ಗಂಟೆಗಳಲ್ಲಿ 754 ಹೊಸ ಕೊರೊನಾ ಸೋಂಕು ಪ್ರಕರಣ ಪತ್ತೆ

ದೇಶದಾದ್ಯಂತ ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 700ಕ್ಕೂ ಅಧಿಕ ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,623ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ನವದೆಹಲಿ: ದೇಶದಾದ್ಯಂತ ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 700ಕ್ಕೂ ಅಧಿಕ ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,623ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಕಳೆದ ವರ್ಷ ನವೆಂಬರ್ 12ರಂದು 734 ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. 

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇಂದು 754 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಕರ್ನಾಟಕದಲ್ಲಿ ಒಬ್ಬರು ಸಾವಿಗೀಡಾಗಿರುವುದು ಸೇರಿದಂತೆ ಈವರೆಗೆ ಒಟ್ಟು 5,30,790 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಈಮೂಲಕ ಈವರೆಗೆ 4,46,92,710 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.80ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ದೇಶದಾದ್ಯಂತ ಈವರೆಗೆ 4,41,57,297 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ.

ಸಚಿವಾಲಯದ ವೆಬ್‌ಸೈಟಿನಲ್ಲಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿ ಈವರೆಗೆ 220.64 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ