ಸಾಂದರ್ಭಿಕ ಚಿತ್ರ 
ದೇಶ

ಬಾಡಿಗೆ ಮನೆಯಲ್ಲಿದ್ದ ವಿದ್ಯಾರ್ಥಿ ನೇಣಿಗೆ ಶರಣು; ಶವ ನೋಡಿದ ಮನೆಯ ಮಾಲೀಕನಿಗೆ ಹೃದಯಾಘಾತ, ಸಾವು!

ಪರೀಕ್ಷೆಯ ಒತ್ತಡದ ಕಾರಣ ಬಾಡಿಗೆ ಮನೆಯಲ್ಲಿದ್ದ 10ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ ಮನೆಯ ಮಾಲೀಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಧೋಲ್ ಪುರ್ ಜಿಲ್ಲೆಯಲ್ಲಿ ನಡೆದಿದೆ.

ಧೋಲ್ ಪುರ್: ಪರೀಕ್ಷೆಯ ಒತ್ತಡದ ಕಾರಣ ಬಾಡಿಗೆ ಮನೆಯಲ್ಲಿದ್ದ 10ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ ಮನೆಯ ಮಾಲೀಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಧೋಲ್ ಪುರ್ ಜಿಲ್ಲೆಯಲ್ಲಿ ನಡೆದಿದೆ. ಧೋಲ್‌ಪುರದ ಮಾಧವಾನಂದ ಕಾಲೋನಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಾ ಬಾಡಿಗೆ ಮನೆಯೊಂದರಲ್ಲಿದ್ದ ಪುಷ್ಪೇಂದ್ರ ರಜಪೂತ್ (17) ಬುಧವಾರ ತನ್ನ ಊರಿನಿಂದ ಹಿಂತಿರುಗಿದ ನಂತರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಠಡಿಯಲ್ಲಿ ಶವ ನೇತಾಡುತ್ತಿದ್ದನ್ನು ನೋಡಿ ಮನೆ ಮಾಲೀಕ ಬಹದ್ದೂರ್ ಸಿಂಗ್ (70) ಸಹಾಯಕ್ಕಾಗಿ ಕಿರುಚಿದ್ದಾರೆ. ನಂತರ ಅವರ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟು ಕುಸಿದುಬಿದ್ದಿರುವುದಾಗಿ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿಯ ಕೊಠಡಿಯಿಂದ ಸೂಸೈಡ್ ನೋಟ್ ವಶಪಡಿಸಿಕೊಳ್ಳಲಾಗಿದೆ. ಮನೆ ಮಾಲೀಕ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಶವವನ್ನು ಆಸ್ಪತ್ರೆಯ ಶವಗಾರಾದಲ್ಲಿ ಇಡಲಾಗಿದೆ ಎಂದು ನಿಹಾಲ್ ಗಂಜ್ ಠಾಣಾಧಿಕಾರಿ ವಿಜಯ್ ಮೀನಾ ಹೇಳಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು, ಸಿಆರ್ ಸಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!