ಮಮತಾ ಭೇಟಿ ಮಾಡಿದ ಅಖಿಲೇಶ್ ಯಾದವ್ 
ದೇಶ

ಮಮತಾ ಭೇಟಿ ಮಾಡಿದ ಅಖಿಲೇಶ್ ಯಾದವ್; ಕಾಂಗ್ರೆಸ್ ಹೊರಗಿಟ್ಟು ಹೊಸ ರಂಗ ರಚನೆಗೆ ಯತ್ನ

ಕಾಂಗ್ರೆಸ್ ಜೊತೆಗಿನ ಭಿನ್ನಾಭಿಪ್ರಾಯಗಳ ನಡುವೆಯೇ ಸಮಾಜವಾದಿ ಪಕ್ಷದ(ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಶುಕ್ರವಾರ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕೋಲ್ಕತ್ತಾ: ಕಾಂಗ್ರೆಸ್ ಜೊತೆಗಿನ ಭಿನ್ನಾಭಿಪ್ರಾಯಗಳ ನಡುವೆಯೇ ಸಮಾಜವಾದಿ ಪಕ್ಷದ(ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಶುಕ್ರವಾರ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಅವರ ಕಾಲಿಘಾಟ್ ನಿವಾಸದಲ್ಲಿ ಭೇಟಿ ಮಾಡಿದರು.

ಉಭಯ ನಾಯಕರು ಬಿಜೆಪಿ ವಿರೋಧಿ, ಕಾಂಗ್ರೆಸೇತರ ವಿರೋಧ ಪಕ್ಷಗಳ ಹೊಸ ರಂಗ ರಚಿಸಲು ಉತ್ಸುಕರಾಗಿದ್ದಾರೆ ಎಂದು ನಂಬಲಾಗಿದೆ. 

ಅಖಿಲೇಶ್ ಯಾದವ್ ಅವರು ತಮ್ಮ ಪಕ್ಷದ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲು ಕೋಲ್ಕತ್ತಾಗೆ ಆಗಮಿಸಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್ ಎರಡರಿಂದಲೂ ಸಮಾನ ಅಂತರ ಕಾಯ್ದುಕೊಳ್ಳಲು ಮುಂದಾಗಿರುವ ಸಮಾನ ಮನಸ್ಕ ಪ್ರಾದೇಶಿಕ ಪಕ್ಷಗಳ ವೇದಿಕೆ ರೂಪಿಸುವ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಅಖಿಲೇಶ್ ಯಾದವ್ ಅವರು ಮಮತಾ ಬ್ಯಾನ್ಯರ್ಜಿ ಅವರನ್ನು ಭೇಟಿ ಮಾಡಿರುವುದು ಮಹತ್ವ ಪಡೆದುಕೊಂಡಿದೆ.

ಬಿಜು ಜನತಾ ದಳದ ಮುಖ್ಯಸ್ಥರಾದ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮುಂದಿನ ವಾರ ಭೇಟಿ ಮಾಡುತ್ತಿದ್ದು, ಪಟ್ನಾಯಕ್ ಕೂಡ ಹೊಸ ರಂಗದಲ್ಲಿ ಸೇರಿಕೊಳ್ಳುವ ಸಾಧ್ಯತೆ ಇದೆ.

ಕಾಂಗ್ರೆಸ್ ಸರಿಯಾದ ಸಮಯದಲ್ಲಿ ಸರಿಯಾದ ಕೆಲಸವನ್ನು ಮಾಡುತ್ತಿಲ್ಲ ಮತ್ತು ಅದು ವಿರೋಧ ಪಕ್ಷಗಳ 'ಬಿಗ್ ಬಾಸ್' ಆಗಲು ಪ್ರಯತ್ನಿಸುತ್ತಿದೆ ಎಂದು ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT