ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಲೈಂಗಿಕ ದೌರ್ಜನ್ಯ ಹೇಳಿಕೆ: ನೋಟಿಸ್ ನೀಡಲು ಬಂದ ಪೊಲೀಸರ 3 ಗಂಟೆ ಕಾಯುವಂತೆ ಮಾಡಿದ ರಾಹುಲ್ ಗಾಂಧಿ!

ಲೈಂಗಿಕ ದೌರ್ಜನ್ಯ ಹೇಳಿಕೆ ವಿಚಾರವಾಗಿ ನೋಟಿಸ್ ನೀಡಲು ಹೋಗಿದ್ದ ದೆಹಲಿ ಪೊಲೀಸರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬರೊಬ್ಬರಿ ಮೂರು ಗಂಟೆ ಕಾಯುವಂತೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ
Srinivasa Murthy VN
Updated On : 17 Mar 2023, 3:24 pm

ನವದೆಹಲಿ: ಲೈಂಗಿಕ ದೌರ್ಜನ್ಯ ಹೇಳಿಕೆ ವಿಚಾರವಾಗಿ ನೋಟಿಸ್ ನೀಡಲು ಹೋಗಿದ್ದ ದೆಹಲಿ ಪೊಲೀಸರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬರೊಬ್ಬರಿ ಮೂರು ಗಂಟೆ ಕಾಯುವಂತೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಭಾರತ್ ಜೋಡೋ ಯಾತ್ರೆ ವೇಳೆ 'ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನಿಮ್ಮನ್ನು ಸಂಪರ್ಕಿಸಿದ ಮಹಿಳೆಯರ ವಿವರಗಳನ್ನು ನೀಡಿ, ನಾವು ಅವರಿಗೆ ಭದ್ರತೆ ನೀಡುತ್ತೇವೆ ಎಂದು ಹೇಳಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: ನಟಿ ಸ್ವರ ಭಾಸ್ಕರ್-ಫಹಾದ್ ಅಹ್ಮದ್ 'ಶಾದಿ' ರಿಸೆಪ್ಷನ್ ಗೆ ತೆರಳಿ ಶುಭಕೋರಿದ ರಾಹುಲ್ ಗಾಂಧಿ

Advertisement

Advertisement

ಈ ನೋಟಿಸ್ ಜಾರಿಗಾಗಿ ರಾಹುಲ್ ಗಾಂಧಿ ಅವರ ದೆಹಲಿ ನಿವಾಸಕ್ಕೆ ತೆರಳಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ಸುಮಾರು 3 ಗಂಟೆ ಕಾದಿದ್ದಾರೆ ಎನ್ನಲಾಗಿದೆ. ಮೂರು ಗಂಟೆ ಕಾದರೂ ಪೊಲೀಸ್ ತಂಡವನ್ನು ರಾಹುಲ್ ಗಾಂಧಿ ಭೇಟಿ ಮಾಡಲಿಲ್ಲ. ಬಳಿಕ ಒಂದೂವರೆ ಗಂಟೆಗಳ ನಂತರ ವೈಯಕ್ತಿಕವಾಗಿ  ರಾಹುಲ್ ಗಾಂಧಿ ನೋಟಿಸ್ ಸ್ವೀಕರಿಸಿದರು ಎನ್ನಲಾಗಿದೆ. 

ಈ ವರ್ಷದ ಜನವರಿಯಲ್ಲಿ ಶ್ರೀನಗರದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವೇಳೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ವಿವರಗಳನ್ನು ಕೋರಿ ದೆಹಲಿ ಪೊಲೀಸರು ಬುಧವಾರ ಕಾಂಗ್ರೆಸ್ ನಾಯಕನಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: 'ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ' ಹೇಳಿಕೆ: ದೆಹಲಿ ಪೊಲೀಸರಿಂದ ರಾಹುಲ್ ಗಾಂಧಿಗೆ ನೋಟಿಸ್

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಶ್ರೀನಗರದಲ್ಲಿ ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ, ಒಂದು ನಿರ್ದಿಷ್ಟ ಪ್ರಕರಣದಲ್ಲಿ ಒಬ್ಬ ಹುಡುಗಿ ತಮ್ಮ ಮೇಲೆ ಅತ್ಯಾಚಾರ ನಡೆದಿದೆ ಎಂದು ಅಳಲು ತೋಡಿಕೊಂಡಳು. ಆ ಸಂದರ್ಭದಲ್ಲಿ ನಾನು ಪೊಲೀಸರಿಗೆ ಕರೆ ಮಾಡಬೇಕೇ ಎಂದು ಪ್ರಶ್ನಿಸಿದೆ. ಆದರೆ ಪೊಲೀಸರಿಗೆ ಕರೆ ಮಾಡಬೇಡಿ. ಅದರಿಂದ ನನಗೆ ಅವಮಾನವಾಗುತ್ತದೆ ಎಂದು ಆಕೆ ಹೇಳಿರುವುದಾಗಿ ರಾಹುಲ್ ಗಾಂಧಿ ತಿಳಿಸಿದ್ದರು.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement