ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ 
ದೇಶ

ಉತ್ತರ ಪ್ರದೇಶದಲ್ಲಿ ಕೋಲ್ಡ್ ಸ್ಟೋರೇಜ್ ಕುಸಿತ: 11 ಸಾವು, 21 ಜನರ ರಕ್ಷಣೆ

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಕೋಲ್ಡ್ ಸ್ಟೋರೇಜ್ ಕುಸಿದು ಬಿದ್ದು ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿದ್ದು, ಅವಶೇಷಗಳಡಿಯಿಂದ 21 ಜನರನ್ನು ರಕ್ಷಿಸಲಾಗಿದೆ.

ಲಖನೌ: ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಕೋಲ್ಡ್ ಸ್ಟೋರೇಜ್ ಕುಸಿದು ಬಿದ್ದು ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿದ್ದು, ಅವಶೇಷಗಳಡಿಯಿಂದ 21 ಜನರನ್ನು ರಕ್ಷಿಸಲಾಗಿದೆ.

ಗುರುವಾರ ಮಧ್ಯಾಹ್ನ ಸಂಭಾಲ್ ಜಿಲ್ಲೆಯ ಚಂದೌಸಿ ಪ್ರದೇಶದಲ್ಲಿ ಕೋಲ್ಡ್ ಸ್ಟೋರೇಜ್‌ನ ಮೇಲ್ಛಾವಣಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿತ್ತು. ಎರಡನೇ ದಿನವೂ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಮುಂದುವರೆದಿದೆ.

 ಅಧಿಕೃತ ಮೂಲಗಳ ಪ್ರಕಾರ, ಇಂದು ಮತ್ತೆ ಇಬ್ಬರು ಸಾವನ್ನಪ್ಪಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು 21 ಜನರನ್ನು ರಕ್ಷಿಸಿದ್ದು, ಈ ಪೈಕಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ. 

ಘಟನೆ ನಡೆದ ಸ್ಥಳಕ್ಕೆ ರಾಜ್ಯ ಪಶುಸಂಗೋಪನಾ ಸಚಿವ ಧರಂಪಾಲ್ ಸಿಂಗ್ ಭೇಟಿ ನೀಡಿ, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ. 

ಘಟನೆಗೆ ಸಂಬಂಧಿಸಿದಂತೆ ಸಂಭಾಲ್ ಜಿಲ್ಲಾ ತೋಟಗಾರಿಕಾ ಅಧಿಕಾರಿಯನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel